ಕೀವ್: ಶತ್ರುಗಳ ಟ್ಯಾಂಕರ್‌ಗಳನ್ನು ತಡೆಯಲು ಉಕ್ರೇನ್ ಸೈನಿಕನೊಬ್ಬ ಸೇತುವೆ ಜೊತೆಗೆ ತನ್ನನ್ನು ಸ್ಫೋಟಿಸಿಕೊಂಡು ಪ್ರಾಣ ತ್ಯಾಗವನ್ನು ಮಾಡಿದ್ದಾರೆ.
ನಾವು ಬದುಕಿರುವವರೆಗೂ ಹೋರಾಡುತ್ತೇವೆ ಎಂದು ಉಕ್ರೇನ್ ಸೇನೆ ಹೇಳಿದೆ. ಈ ಬೆನ್ನಲ್ಲೆ ಮೆರೈನ್ ಬೆಟಾಲಿಯನ್ ಎಂಜಿನಿಯರ್ ವಿಟಾಲಿ ಸ್ಕಕುನ್ ವೊಲೊಡಿಮಿರೊವಿಚ್ ಅವರು, ರಷ್ಯಾದ ಆಕ್ರಮೀಕ ಕ್ರೈಮಿಯಾವನ್ನು ಉಕ್ರೇನ್ ಮುಖ್ಯ ಭೂಭಾಗಕ್ಕೆ ಸಂಪರ್ಕಿಸುವ ಸೇತುವೆಯಲ್ಲಿ ಶತ್ರುಗಳ ಟ್ಯಾಂಕರ್‌ಗಳನ್ನು ತಡೆಯಲು ಸ್ಫೋಟಿಸಿದ್ದಾರೆ.
ಉಕ್ರೇನಿನ ಮಿಲಿಟರಿ ಪ್ರಕಾರ ರಷ್ಯಾದ ಟ್ಯಾಂಕ್‍ಗಳು ಆಕ್ರಮಣ ಮಾಡಿದಾಗ ವೊಲೊಡಿಮಿರೊವಿಚ್ ಅವರನ್ನು ದಕ್ಷಿಣ ಪ್ರಾಂತ್ಯದ ಖೆರ್ಸನ್‍ನಲ್ಲಿರುವ ಹೆನಿಚೆಸ್ಕ್ ಸೇತುವೆ ಭದ್ರತೆ ನಿಯೋಜಿಸಲಾಗಿತ್ತು. ರಷ್ಯಾದ ಟ್ಯಾಂಕ್‍ಗಳನ್ನು ತಡೆಯುವ ಏಕೈಕ ಮಾರ್ಗವೆಂದರೆ ಸೇವೆಯನ್ನು ಸ್ಫೋಟಿಸುವುದು ಎಂದು ಸೈನ್ಯ ನಿರ್ಧರಿಸುತ್ತು. ಈ ಪ್ರಕಾರವಾಗಿ ವೊಲೊಡಿಮಿರೊವಿಚ್ ಈ ಕೆಲಸಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾದರು. ಸೇತುವೆಯನ್ನು ಸ್ಫೋಟಿಸಿದ ವೊಲೊಡಿಮಿರೊಚ್ ಅವರಿಗೆ ವಾಪಸ್ ಆಗಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪಡೆಗಳ ಜನರಲ್ ಸ್ಟಾಫ್ ಹೇಳಿದ್ದಾರೆ.
ಉಕ್ರೇನ್ ಮೇಲೆ ಮಿಲಿಟರಿ ದಾಳಿ ನಡೆಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಘೋಷಿಸಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ರಷ್ಯಾ ಸೇನೆ ಮತ್ತು ಕ್ಷಿಪಣಿಗಳು ಉಕ್ರೇನ್ ಮೇಲೆ ದಾಳಿ ನಡೆಸಿತು. ರಷ್ಯಾ ನಡೆಗೆ ಅಮೆರಿಕ ಸೇರಿದಂತೆ ಅನೇಕ ಯೂರೋಪ್ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಉಕ್ರೇನ್ ಮೇಲೆ ಸತತ ಮೂರನೇ ದಿನವೂ ರಷ್ಯಾ ದಾಳಿ ಮುಂದುವರಿಸಿದೆ. ಉಕ್ರೇನ್‍ನಲ್ಲಿ ಈವರೆಗೆ 198 ಮಂದಿ ಸಾವಿಗೀಡಾಗಿದ್ದಾರೆ. ಸದ್ಯ ರಷ್ಯಾ ಸೇನಾ ಪಡೆ ಉಕ್ರೇನ್ ರಾಜಧಾನಿ ಕೀವ್ ಪ್ರವೇಶಿಸಿದ್ದು, ಬೃಹತ್ ಕಟ್ಟಡಗಳ ಮೇಲೆ ಕ್ಷಿಪಣಿಗಳ ದಾಳಿ ನಡೆಸಲಾಗಿದೆ. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ
ಬಾಂಬ್ ಸ್ಫೋಟಕ್ಕೆ ಜನರು ದಿಕ್ಕಾಪಾಲಾಗಿ ಓಡುತ್ತಿದ್ದಾರೆ. ಈಗಾಗಲೇ ಕೀವ್ ನಗರವನ್ನು ರಷ್ಯಾ ಸೇನೆ ಸಂಪೂರ್ಣವಾಗಿ ಸುತ್ತವರಿದಿದ್ದು, ಕ್ಷಣಕ್ಷಣಕ್ಕೂ ಆತಂಕ ಸೃಷ್ಟಿಯಾಗುತ್ತಿದೆ. ಕೀವ್‌ನಲ್ಲಿ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇಂಟರ್‍ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ. ಈ ಮಧ್ಯೆಯೂ ಉಕ್ರೇನ್ ಅಧ್ಯಕ್ಷ ದಿಟ್ಟತನದ ಮಾತಗಳನ್ನಾಡಿದ್ದಾರೆ. ಇದನ್ನೂ ಓದಿ: ಉಕ್ರೇನ್ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್ ಮಾಡಿ ಕೇಂದ್ರಕ್ಕೆ ರಾಗಾ ಮನವಿ
ಕೀವ್ ತೊರೆಯುವಂತೆ ಅಮೆರಿಕ ಝೆಲೆಸ್ಕಿಗೆ ಸಲಹೆ ನೀಡಿತ್ತು. ಆದರೆ ದೊಡ್ಡಣ್ಣನ ಸಲಹೆಯನ್ನು ಉಕ್ರೇನ್ ಅಧ್ಯಕ್ಷ ಧಿಕ್ಕರಿಸಿದ್ದಾರೆ. ನಾನು ನನ್ನ ದೇಶದಲ್ಲಿಯೇ ಇರುತ್ತೇನೆ. ನನಗ್ಯಾವ ಜೀವ ಭಯ ಇಲ್ಲ. ಹೀಗಾಗಿ ನನಗೆ ಸ್ಥಳಾಂತರ ಬೇಡ, ಮದ್ದುಗುಂಡುಗಳು ಬೇಕು. ರಷ್ಯಾ ಸೇನೆ ವಿರುದ್ಧ ನಾನು ಕೊನೆಯವರೆಗೂ ಹೋರಾಟ ಮಾಡುತ್ತೇನೆ ಎಂದು ಆಕ್ರೋಶ ಹೊರಹಾಕಿದ್ದಾರೆ.