– 1 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ
ಮಂಗಳೂರು: ಕೇಂದ್ರ ಸರ್ಕಾರದ ವಕ್ಫ್ ತಿದ್ದುಪಡಿ ಕಾಯ್ದೆ (Waqf Amendment Act) ವಿರುದ್ಧ ಮಂಗಳೂರಿನಲ್ಲಿ (Mangaluru) ಇಂದು ಭಾರೀ ಪ್ರತಿಭಟನೆ ನಡೆಯಲಿದೆ.
ಕರ್ನಾಟಕದಲ್ಲೇ ಅತೀ ದೊಡ್ಡ ಪ್ರತಿಭಟನೆಗೆ ಉಲೇಮಾ ಸಮನ್ವಯ ಸಮಿತಿ (Ulema Coordination Committee) ಕರೆ ನೀಡಿದೆ. ನಗರದ ಅಡ್ಯಾರ್ ಕಣ್ಣೂರಿನ ಷಾ ಗಾರ್ಡನ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಪ್ರತಿಭಟನಾ ಸಭೆ ಆರಂಭಗೊಳ್ಳಲಿದೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ – ಮೋದಿಯನ್ನು ಭೇಟಿಯಾಗಿ ಧನ್ಯವಾದ ಹೇಳಿದ ಮುಸ್ಲಿಮರು
ಈ ಸಭೆಯಲ್ಲಿ ಇಸ್ಲಾಂ ಧರ್ಮದ ಧರ್ಮಗುರುಗಳು, ಧಾರ್ಮಿಕ ಮುಖಂಡರುಗಳು, ಉಲೇಮಾಗಳು ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಜಿಲ್ಲೆಯ ಎಲ್ಲಾ ಮುಸ್ಮಿಮರನ್ನು ಕಡ್ಡಾಯ ಭಾಗಿಯಾಗಲು ಎಲ್ಲಾ ಮಸೀದಿ ಜಮಾತ್‌ನಲ್ಲೂ ಕರೆ ನೀಡಲಾಗಿದೆ. ಇದನ್ನೂ ಓದಿ: Mangaluru| ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಹೊರರಾಜ್ಯದ ಯುವತಿ ಪತ್ತೆ – ಗ್ಯಾಂಗ್ ರೇಪ್ ಯತ್ನ ಶಂಕೆ, ಮೂವರು ಅರೆಸ್ಟ್
ಒಂದು ಲಕ್ಷಕ್ಕೂ ಅಧಿಕ ಜನ ಸೇರೋ ನಿರೀಕ್ಷೆ ಇದೆ. ಪ್ರತಿಭಟನಾ ಸಭೆ ಹಿನ್ನಲೆಯಲ್ಲಿ ಖಾಕಿ ಸರ್ಪಗಾವಲು ಹಾಕಿದ್ದು ಎರಡು ಸಾವಿರಕ್ಕೂ ಅಧಿಕ ಪೊಲೀಸರು, ಅರೆಸೇನಾ ಪಡೆಯಿಂದ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಜಾತಿಗಣತಿ ವಿಶೇಷ ಕ್ಯಾಬಿನೆಟ್- ಲಿಂಗಾಯತ, ಒಕ್ಕಲಿಗ, ದಲಿತ, ಅಲ್ಪಸಂಖ್ಯಾತರು ಹೇಳಿದ್ದೇನು? ಇಲ್ಲಿದೆ ಇನ್‌ಸೈಡ್ ಸ್ಟೋರಿ