ಭೋಪಾಲ್: ಮಧ್ಯಪ್ರದೇಶದ ಮಾಜಿ ಸಿಎಂ ಉಮಾಭಾರತಿ ಅವರು ಭೋಪಾಲ್‍ನಲ್ಲಿ ಮದ್ಯದಂಗಡಿಯೊಂದನ್ನು ಧ್ವಂಸಗೊಳಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರು ಟ್ವಿಟ್ಟರ್‌ನಲ್ಲಿ ಮದ್ಯದ ಅಂಗಡಿಯೊಂದಕ್ಕೆ ಕಲ್ಲು ಎಸೆಯುವ ವೀಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಭೋಪಾಲ್‍ನ ಬರ್ಖೇಡಾ ಪಠಾನಿ ಆಜಾದ್ ನಗರದ ಲೇಬರ್ ಕಾಲೋನಿಯಲ್ಲಿನ ಮದ್ಯದ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಡಳಿತವನ್ನು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.
Advertisement
1) बरखेड़ा पठानी आझाद नगर, बीएचईएल भोपाल , यहाँ मज़दूरों की बस्ती में शराब की दुकानों की शृंखला हैं जो की एक बड़े आहाता में लोगों को शराब परोसते हैं । pic.twitter.com/dNAXrh1jRY
— Uma Bharti (@umasribharti) March 13, 2022
ಭೋಪಾಲ್‍ನ ಬರ್ಖೇಡಾ ಪಠಾನಿ ಆಜಾದ್ ನಗರದ, ಲೇಬರ್ ಕಾಲೋನಿಯಲ್ಲಿ ಮದ್ಯದ ಅಂಗಡಿಗಳ ಸಾಲು ಇದೆ. ಇಲ್ಲಿನ ನಿವಾಸಿಗಳು, ಮಹಿಳೆಯರು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದರು. ನಾನು ಒಂದು ವಾರದೊಳಗೆ ಅಂಗಡಿ ಮತ್ತು ಅಂಗಳವನ್ನು ಮುಚ್ಚುವಂತೆ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದೇನೆ ಉಮಾಭಾರತಿ ಹೇಳಿದ್ದಾರೆ. ಇದನ್ನೂ ಓದಿ: ರಣಬೀರ್ ಕಪೂರ್ ಸ್ಟೆಷಲ್ ಸಾಂಗ್‍ಗೆ ರಶ್ಮಿಕಾ ಸ್ಟೆಪ್
Advertisement
2) मज़दूरों की बस्ती हैं, पास में मंदिर हैं, छोटे बच्चों के स्कूल हैं । जब लड़कियाँ और महिलायें छतों पर खड़ी होती हैं तो शराब पिये हुए लोग उनके तरफ़ मुँह करके लघुशंका करने के लिए खड़े होकर उनको लज्जित करते हैं ।
— Uma Bharti (@umasribharti) March 13, 2022
ಕಳೆದ ವರ್ಷ, ಮಾಜಿ ಕೇಂದ್ರ ಸಚಿವೆ ಜನವರಿ 15ರೊಳಗೆ ರಾಜ್ಯದಲ್ಲಿ ಮದ್ಯವನ್ನು ನಿಷೇಧಿಸದಿದ್ದರೆ ಬೀದಿಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಅವರ ಬೇಡಿಕೆಗೆ ವಿರುದ್ಧವಾಗಿ, ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ನೇತೃತ್ವದ ಸರ್ಕಾರವು ಹೊಸ ಅಬಕಾರಿ ನೀತಿಯನ್ನು ಘೋಷಿಸಿತು.