ಬೆಂಗಳೂರು: ತಂತ್ರಜ್ಞಾನದ ಅವಕಾಶಗಳನ್ನು ಸೂಕ್ತವಾಗಿ ಸದುಪಯೋಗಪಡಿಸಿಕೊಳ್ಳುವ ಮೂಲಕ ಯಶಸ್ವಿ ಮಹಿಳಾ ಉದ್ಯಮಿಗಳಾಗಬಹುದು ಎಂದು ಹೈಟೆಕ್ ಮ್ಯಾಗ್ನಟಿಕ್ ಸಲ್ಯೂಶನ್ಸ್ ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ಪತ್ರಕರ್ತೆಯರ ಸಂಘ, ಎಫ್ ಕೆಸಿಸಿಐ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಗರದಲ್ಲಿಂದು ಪತ್ರಕರ್ತೆಯರಿಗಾಗಿ ಆಯೋಜಿಸಿದ್ದ ಡಿಜಿಟಲ್ ಲಿಟರಸಿ ಕಾರ್ಯಾಗಾರದಲ್ಲಿ ತಂತ್ರಜ್ಞಾನ ಹಾಗೂ ಅವಕಾಶಗಳ ಕುರಿತು ಮಾತನಾಡಿದರು. ಇದನ್ನೂ ಓದಿ: ಪ್ರಶಾಂತ್ ಸಂಬರಗಿ ಸಾರಥ್ಯದಲ್ಲಿ ಸಿನಿಮಾವಾಗ್ತಿದೆ ‘ಆಗಸ್ಟ್ 15’ರ ಸ್ಟೋರಿ
Advertisement
Advertisement
ಪ್ರಸ್ತುತ ಡಿಜಿಟಲ್ ಲಿಟರಸಿ ಮುಖ್ಯವಾಗಿದೆ. ಅದರಲ್ಲೂ ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಕೆ ಹೆಚ್ಚಾಯಿತು. ಹೆಚ್ಚು ಜನರನ್ನು ತಲುಪಲು ಸಾಧ್ಯವಾಯಿತು. ಪ್ರತಿ ದಿನ ತಂತ್ರಜ್ಞಾನ ಅಪ್ ಗ್ರೇಡ್ ಆಗುತ್ತಿರುತ್ತದೆ. ಅದನ್ನು ಹೇಗೆ ಬಳಸಿಕೊಳ್ಳಬೇಕು, ಪ್ರಯೋಜನಗಳು ಮತ್ತು ನೆಟ್ ವಕಿರ್ಂಗ್ ಕುರಿತು ಅರಿವು ಇರಲೇಬೇಕು. ಅಗತ್ಯವಿರುವ ಮತ್ತು ಸೂಕ್ತವಾದ ತಂತ್ರಜ್ಞಾನ ಬಳಸಿಕೊಂಡು ಯಶಸ್ವಿ ಮಹಿಳಾ ಉದ್ಯಮಿಯಾಗಬಹುದು ಎಂದರು. ಇದನ್ನೂ ಓದಿ: 40% ಕಮಿಷನ್ – ಈಶ್ವರಪ್ಪ ವಿರುದ್ಧ ಮೋದಿಗೆ ಪತ್ರ ಬರೆದ ಗುತ್ತಿಗೆದಾರ
Advertisement
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ರಜಿನಿ ರಮೇಶ್ ಮಾತನಾಡಿ, ಪ್ರತಿಯೊಬ್ಬರು ತಮ್ಮನ್ನು ತಾವು ತೆರೆದುಕೊಳ್ಳಲು ಸಾಮಾಜಿಕ ಜಾಲತಾಣ ಉತ್ತಮ ವೇದಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇರುವ ಅವಕಾಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಆದರೂ ಅವುಗಳನ್ನು ವೈಯಕ್ತಿಕ ಸುರಕ್ಷತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆಯಿಂದ ಬಳಸಬೇಕು. ಈ ಅರಿವು ಅತ್ಯಗತ್ಯ ಎಂದು ತಿಳಿಸಿದರು. ಪತ್ರಕರ್ತೆಯರಿಗೆ ಅಗತ್ಯವಿರುವ ಸೋಶಿಯಲ್ ಮೀಡಿಯಾ, ಬಳಕೆ, ಉಪಯೋಗ ಕುರಿತು ಪ್ರಾತ್ಯಕ್ಷಿಕೆ ನೀಡುವ ಮೂಲಕ ವಿವರಿಸಿದರು.
Advertisement
ಸಂಘದ ಅಧ್ಯಕ್ಷೆ ಶಾಂತಲಾ ಧರ್ಮರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಕಾರ್ಯಚಟುವಟಿಕೆ ಹಾಗೂ ಪತ್ರಕರ್ತೆಯರ ಮುಂದಿರುವ ಸವಾಲುಗಳ ಬಗ್ಗೆ ವಿವರಿಸಿದರು. ಕಾರ್ಯಾಗಾರದಲ್ಲಿ ಸಂಘದ ಕಾರ್ಯದರ್ಶಿ ಮಾಲತಿ ಭಟ್, ಹಿರಿಯ ಪತ್ರಕರ್ತೆ ಕೆ.ಹೆಚ್. ಸಾವಿತ್ರಿ, ಆಕಾಶವಾಣಿ ನಿರ್ದೇಶಕಿ ನಿರ್ಮಲಾ ಎಲಿಗಾರ್, ಪಿಐಬಿ ಅಧಿಕಾರಿ ಜಯಂತಿ ಕೆ.ವೈ ಸೇರಿದಂತೆ ಹಿರಿಯ ಹಾಗೂ ಕಿರಿಯ ಪತ್ರಕರ್ತೆಯರು ಭಾಗವಹಿಸಿದ್ದರು.