ಕಲಬುರಗಿ: ಜಾಧವ್ ಬಿಜೆಪಿಗೆ ಹೋಗುವುದಕ್ಕೆ 50 ಕೋಟಿ ಹಣ ತೆಗೆದುಕೊಂಡಿದ್ದಾರೆ ಎಂದು ಪ್ರೀಯಾಂಕ್ ಖರ್ಗೆ ಅವರ ಅಪ್ಪ-ಅಮ್ಮ ಮತ್ತು ಮಕ್ಕಳ ಮೇಲೆ ಆಣೆ ಮಾಡಲಿ. ನಾನು ಬೇಕಾದವರ ಮೇಲೆ ಆಣೆ ಮಾಡಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸಂಭವನೀಯ ಅಭ್ಯರ್ಥಿ ಉಮೇಶ್ ಜಾಧವ್ ಸವಾಲು ಹಾಕಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಉಮೇಶ ಜಾಧವ್, ಸುಮ್ಮನೆ ಕೆಳಮಟ್ಟದ ರಾಜಕಾರಣ ಮಾಡಬಾರದು. ಒಂದೇ ಕಥೆಯನ್ನು ಎಲ್ಲ ಕಡೆ ಹೇಳಿಕೊಂಡು ತಿರಾಗುಡುತ್ತಿದ್ದಾರೆ. ಅವರು ಸರ್ಕಾರದ ಬಗ್ಗೆ, ಪೃಧಾನಿ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೂ ಟೀಕೆ ಮಾಡುತ್ತಿದ್ದಾರೆ. ನಾನು ಬಿಜೆಪಿಯಿಂದ 50 ಕೋಟಿ ಹಣ ಪಡೆದಿದ್ದೇನೆ ಎಂದು ಪ್ರಿಯಾಂಕ್ ಖರ್ಗೆ ಪ್ರಮಾಣ ಮಾಡಿ ಹೇಳಲಿ. ನಾನು ಪ್ರಮಾಣ ಮಾಡಲು ಸಿದ್ಧನಿದ್ದೇನೆ. ನಾನು ಜಗತ್ತಿನ ಯಾವುದೇ ತನಿಖಾ ಸಂಸ್ಥೆಯಿಂದ ತನಿಖೆ ಎದುರಿಸಲು ಸಿದ್ಧ ಎಂದು ಸವಾಲು ಹಾಕಿದ್ದಾರೆ.
Advertisement
Advertisement
ಇದುವರೆಗೆ ಆಗದ ಅಭಿವೃದ್ದಿ ಒಂದೇ ವರ್ಷದಲ್ಲಿ ಮಾಡಿ ತೋರಿಸುವೆ. ನಮ್ಮಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರೆ. ಆದರೆ ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಸ್ಪೀಕರ್ ಒಬ್ಬ ಪ್ರಿನ್ಸಿಪಲ್ ವ್ಯಕ್ತಿಯಾಗಿದ್ದು, ಅವರ ಮೇಲೆ ನಂಬಿಕೆ ಇದೆ. ಇದನ್ನು ಅವರನ್ನು ಖುಷಿ ಪಡಿಸಲು ಹೇಳುತ್ತಿಲ್ಲ. ಆರು ವರ್ಷದಿಂದ ಅವರನ್ನು ನಾನು ಕಂಡಿದ್ದೇನೆ. ಹೀಗಾಗಿ ಹೃದಯದಿಂದ ಈ ಮಾತು ಹೇಳುತ್ತಿದ್ದೇನೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೇ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಉಮೇಶ್ ಜಾಧವ್ ಹೇಳಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv