ದಾವಣಗೆರೆ: ಚಿಂಚೋಳಿ ಶಾಸಕ ಉಮೇಶ್ ಜಾಧವ್ ಬಿಜೆಪಿಯವರಿಗೆ ಮೊದಲೇ ಫಿಕ್ಸ್ ಆಗಿದ್ದ. ಮುಂಚಿತವಾಗಿಯೇ ದುಡ್ಡು ಪಡೆದಿದ್ದ ಅದಕ್ಕಾಗಿಯೇ ರಾಜೀನಾಮೆ ನೀಡಿದ್ದಾನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕಿಡಿಕಾರಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಜಾಧವ್ ಮೊದಲೇ ಬಿಜೆಪಿ ಅವರೊಂದಿಗೆ ಕೈ ಜೋಡಿಸಿದ್ದಾನೆ. ಜಾಧವ್ ಹಣ ಪಡೆದು ಬಿಜೆಪಿಗೆ ಸೇರಿದ್ದಾನೆ ಎಂದರು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಟಿಕೆಟ್ ಗೊಂದಲ ಶೀಘ್ರ ಬಗೆಹರಿಯುತ್ತದೆ. ಲೋಕಸಭೆ ಚುನಾವಣೆಗೆ ದಾವಣಗೆರೆಯಲ್ಲಿ ಜೆಡಿಎಸ್‍ನವರಿಗೆ ಟಿಕೆಟ್ ಸಿಗುವುದಿಲ್ಲ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಸ್ಪರ್ಧಿಸುತ್ತಾರೆ ಎಂದು ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಇದು ನನ್ನ ಕೊನೆ ಚುನಾವಣೆ ಎಂದ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜಕಾರಣಿಗಳು ಅದನ್ನು ಹೇಳುತ್ತಿರುತ್ತಾರೆ, ಕೊನೆ ಚುನಾವಣೆ ಅಂತ ಮತ್ತೆ ಚುನಾವಣೆಗೆ ನಿಲ್ಲುತ್ತಾರೆ. ಜಿ.ಎಂ ಸಿದ್ದೇಶ್ವರ ಅವರು ಕೂಡ ಕೊನೆ ಚುನಾವಣೆ ಎಂದಿದ್ದಾರೆ. ಇದು ಅವರ ಕೊನೆ ಚುನಾವಣೆ ಆಗಬಹುದು, ಇಲ್ಲ ಜನರೇ ಅವರನ್ನು ಮನೆಗೆ ಕಳುಹಿಸಬಹುದು ಎಂದು ಶಾಮನೂರು ಶಿವಶಂಕರಪ್ಪ ಕುಟುಕಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv