ಚಿಕ್ಕೋಡಿ(ಬೆಳಗಾವಿ): ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ (Umesh Katti) ನೆನೆದು ಪುತ್ರ ಪೃಥ್ವಿ ಕತ್ತಿ ಕಣ್ಣೀರು ಹಾಕಿದ್ದಾರೆ.
ಬೆಲ್ಲದ ಬಾಗೇವಾಡಿ ಗ್ರಾಮದ ಸ್ವ-ಗೃಹದಲ್ಲಿ ಮಾತನಾಡಿದ ಅವರು, ದೊಡ್ಡಪ್ಪ ಸಾವನ್ನಪ್ಪಿದ್ದು ನನಗೆ ನಂಬಲು ಆಗುತ್ತಿಲ್ಲ. ಅವರು ಇನ್ನೂ ಮನೆಗೆ ಬಂದು ನನಗೆ ಬೈಯುತ್ತಾರೆ ಎನ್ನುವ ಆಶಯದಲ್ಲಿದ್ದೇನೆ. ದೇವರು ಇನ್ನೊಮ್ಮೆ ದೊಡ್ಡಪ್ಪನಿಗೆ ಜೀವ ಕೊಡಲಿ ಎಂದು ಕಣ್ಣೀರು ಹಾಕಿದ್ದಾರೆ.
Advertisement
Advertisement
ಅವರು ನನ್ನ ಪಾಲಿಗೆ ತಂದೆ-ತಾಯಿಯಾಗಿದ್ದರು. ನನ್ನ ತಂದೆ ತಾಯಿ ಪ್ರೀತಿಗಿಂತ ಹೆಚ್ಚು ನನ್ನ ದೊಡ್ಡಪ್ಪ ಇದ್ದರು ಎಂದು ಉಮೇಶ್ ಕತ್ತಿ ಸಹೋದರ ರಮೇಶ್ ಕತ್ತಿ (Ramesh Katti) ಪುತ್ರ ಪೃಥ್ವಿ ಕತ್ತಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚಾಟಿ ಏಟು ನೀಡಲು ಕತ್ತಿ ಕೊಡುತ್ತಿದ್ದ ಹೇಳಿಕೆಗಳನ್ನು ನಾವು ಅರ್ಥ ಮಾಡಿಕೊಳ್ತಿರಲಿಲ್ಲ: ಪ್ರತಾಪ್ ಸಿಂಹ
Advertisement
ಆಗಿದ್ದೇನು..?: ಮಂಗಳವಾರ ಸ್ವಕ್ಷೇತ್ರ ಹುಕ್ಕೇರಿಯಿಂದ ಉಮೇಶ್ ಕತ್ತಿ ವಾಪಸ್ಸಾಗಿದ್ದರು. ಡಾಲರ್ಸ್ ಕಾಲೋನಿ ನಿವಾಸದಲ್ಲಿದ್ದ ಉಮೇಶ್ ಕತ್ತಿ ಅವರು ರಾತ್ರಿ ಊಟ ಮುಗಿಸಿ ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು. 10 ನಿಮಿಷವಾದರೂ ಹೊರಗೆ ಬರದಿದ್ದನ್ನು ಗಮನಿಸಿದ ಕುಟುಂಬಸ್ಥರು ಆತಂಕಗೊಂಡಿದ್ದರು. ಹೀಗಾಗಿ ಶೌಚಾಲಯದ ಬಾಗಿಲು ಬಡಿದಿದ್ದಾರೆ.
Advertisement
ಆದರೆ ಕತ್ತಿ ಅವರಿಂದ ಯಾವುದೇ ಪ್ರತಿಕ್ರಿಯೆಯೂ ಬಾರದ ಹಿನ್ನೆಲೆಯಲ್ಲಿ ಸಹಾಯಕರು ಶೌಚಾಲಯದ ಬಾಗಿಲನ್ನು ಒಡೆದು ಒಳಗೆ ಹೋಗಿದ್ದಾರೆ. ಅಲ್ಲಿ ಉಮೇಶ್ ಕತ್ತಿ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡು ಬಂತು. ಕೂಡಲೇ ಅವರನ್ನು ಕಾರಿನಲ್ಲಿ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೇ ನಿನ್ನೆ ರಾತ್ರಿ ಸುಮಾರು 11ರ ವೇಳೆಗೆ ಮೃತಪಟ್ಟಿದ್ದಾರೆ.