ಚಿಕ್ಕೋಡಿ: ಬೆಳಗಾವಿ ಬಿಜೆಪಿ ಪಾಳಯದಲ್ಲಿ ಗುಂಪು ರಾಜಕಾರಣ ನಡೆಯುತ್ತಿದೆ ಎಂಬುದು ಮತ್ತೆ-ಮತ್ತೆ ಸಾಬೀತಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಚಿವ ಉಮೇಶ್ ಕತ್ತಿ ಮನೆಯಲ್ಲಿ ನಡೆದಿದ್ದ ಸಭೆ ಬಿಜೆಪಿ ಅಧಿಕೃತ ಸಭೆ ಅಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದರು. ಅದಕ್ಕೆ ಕತ್ತಿ ಅವರು ಟಾಂಗ್ ಕೊಟ್ಟಿದ್ದಾರೆ.
Advertisement
ಬೆಳಗಾವಿ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ 16 ಕೋಟಿ ರೂ. ಗಳ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರನ್ನ ಬಿಟ್ಟು ನಡೆಸಿದ ರಹಸ್ಯ ಸಭೆಯ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸಭೆಯಲ್ಲಿ ಬಿಜೆಪಿ ಅವರು ಇದ್ರೆ ಅದು ಅಧಿಕೃತ ಬಿಜೆಪಿ ಸಭೆ. ನಾನು ರಾಜ್ಯದ ಸಚಿವ, ಶಾಸಕ ಹಾಗಾಗಿ ಇದೇ ಬಿಜೆಪಿ ಅಧಿಕೃತ ಸಭೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯ ಗೌಪ್ಯ ಸಭೆ ಬಿಜೆಪಿ ಅಧಿಕೃತ ಸಭೆಯಲ್ಲ: ಬಾಲಚಂದ್ರ ಜಾರಕಿಹೊಳಿ
Advertisement
ಸಭೆಯಲ್ಲಿ ಪರಿಷತ್ ಚುನಾವಣೆ ಸೋಲಿನ ಕಾರಣಕ್ಕೆ ಹುಡುಕಾಟ ಮಾಡಿದ್ದು, ನಮ್ಮ ಅಭ್ಯರ್ಥಿ ಚುನಾವಣೆಯಲ್ಲಿ ಸೋತಿದ್ದೇಕೆ ಎಂದು ಚರ್ಚೆ ಮಾಡಿದ್ದೇವೆ. ಮುಂಬರುವ ಜಿಲ್ಲೆ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿ ಅಭ್ಯರ್ಥಿಗಳ ಹುಡುಕಾಟಕ್ಕೆ ಸಭೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
Advertisement
Advertisement
ಪಕ್ಷ ಸಂಘಟನೆ ದೃಷ್ಟಿಯಿಂದ ಸಭೆ ಮಾಡಲಾಗಿದ್ದು, ಸಭೆಯಲ್ಲಿ ಬಂದವರು, ಬಾರದೇ ಇದ್ದವರು ಯಾರೂ ದೊಡ್ಡವರಲ್ಲ. ಪರಿಷತ್ ಪರಾಜಿತ ಅಭ್ಯರ್ಥಿ ಮಹಾಂತೇಶ್ ಕವಟಗಿಮಠ ಎಲ್ಲರನ್ನೂ ಸೇರಿಸುವ ಕೆಲಸ ಮಾಡಿದ್ದರು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ
ಮಹಾಂತೇಶ್ ಅವರು ಯಾರನ್ನ ಕರೆದರು, ಯಾರನ್ನ ಬಿಟ್ಟಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಬಂದವರೆಲ್ಲ ಸೇರಿ ಪಕ್ಷ ಸಂಘಟನೆ ಕುರಿತು ಚರ್ಚೆ ಮಾಡಿದ್ದೇವೆ. ಸಂಪುಟ ವಿಸ್ತರಣೆ ಸಿಎಂ ಬೊಮ್ಮಾಯಿ ವಿವೇಚನೆಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.