ಬೆಳಗಾವಿ (ಚಿಕ್ಕೋಡಿ): ಸಿಎಂ ಕುಮಾರಸ್ವಾಮಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ವಿಚಿತ್ರ. ಕೇವಲ 72 ಜನ ಶಾಸಕರ ಬೆಂಬಲ ಪಡೆದ ಮಂತ್ರಿಯಾದ ಏಕೈಕ ಸರ್ಕಾರ ಇದು. ಪ್ರಪಂಚದಲ್ಲಿ ಎಲ್ಲೂ ಈ ರೀತಿಯ ಸರ್ಕಾರ ಕಾಣ ಸಿಗುವುದಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಕೇವಲ 29 ಮಂದಿ ಶಾಸಕರನ್ನು ಇಟ್ಟುಕೊಂಡು ಕಾಂಗ್ರೆಸ್ ಬೆಂಬಲ ಪಡೆದು ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. 104 ಶಾಸಕರನ್ನು ಇಟ್ಟುಕೊಂಡು ಬಿಜೆಪಿ ವಿರೋಧ ಪಕ್ಷದಲ್ಲಿದೆ. ಕುಮಾರಸ್ವಾಮಿ ಸರ್ಕಾರ ಬಂದ ಮೇಲೆ ಹಾಸನ ಹಾಗೂ ಮಂಡ್ಯ ಬಿಟ್ಟು ಬೇರೆ ಎಲ್ಲೂ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಬೇರೆ ಯಾವುದೇ ಕ್ಷೇತ್ರಗಳಿಗೆ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ಸಾಲ ಮನ್ನಾ ಹೆಸರಲ್ಲಿ ಸಿಎಂ ಕುಮಾರಸ್ವಾಮಿ ಕಥೆ ಹೇಳುತ್ತಿದ್ದಾರೆ. ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಕಿತ್ತಾಟದಿಂದ ಸರ್ಕಾರ ಬಿದ್ದು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Advertisement
Advertisement
ಲೋಕಸಭೆ ಚುನಾವಣೆ ಮಾರಿ ಹಬ್ಬ ಇದ್ದ ಹಾಗೆ ಐದು ವರ್ಷಕೊಮ್ಮೆ ಬರುತ್ತೆ. ಹೀಗಾಗಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲೂ 5 ಜನ ಆಕಾಂಕ್ಷಿಗಳಿದ್ದಾರೆ. ನನ್ನ ಸಹೋಧರ ರಮೇಶ್ ಕತ್ತಿ ಕೂಡ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಆ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಉಮೇಶ್ ಕತ್ತಿ ಹೇಳಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv