ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಇಂದು ಅಧಿಕೃತವಾಗಿ ಪದಗ್ರಹಣ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಶಾಸನಬದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ(Umesh Meti) ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು(Samartha Shamanur) ಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರಿಗೆ ಸಭಾಧ್ಯಕ್ಷರು ಶುಭ ಕೋರಿದರು.

ಈ ಮಹತ್ವದ ಕ್ಷಣಕ್ಕೆ ರಾಜ್ಯ ರಾಜಕಾರಣದ ಹಲವು ಗಣ್ಯರು ಸಾಕ್ಷಿಯಾದರು. ವೇದಿಕೆಯ ಮೇಲೆ ಸಚಿವರಾದ ಸತೀಶ್ ಜಾರಕಿಹೊಳಿ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ, ಮಾಜಿ ಸಚಿವ ಎಸ್.ಆರ್. ಪಾಟೀಲ್ ಹಾಗೂ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ ಉಪಸ್ಥಿತರಿದ್ದರು. ಇದನ್ನೂ ಓದಿ: ಕೇಸರಿ ಪೇಟಕ್ಕೂ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

