Wednesday, 18th July 2018

ಆಸೀಸ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಯಾರು ಇನ್? ಯಾರು ಔಟ್?

ಮುಂಬೈ: ಉಮೇಶ್ ಯಾದವ್ ಮತ್ತು ಮೊಹಮ್ಮದ್ ಶಮಿ ಟೀಂ ಇಂಡಿಯಾಗೆ ವಾಪಸ್ ಆಗಿದ್ದಾರೆ.

ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ 5 ಏಕದಿನ ಪಂದ್ಯಗಳ ಸರಣಿಗೆ ಪ್ರಕಟಿಸಿದ 16 ಮಂದಿಯ ತಂಡದಲ್ಲಿ ಉಮೇಶ್ ಯಾದವ್, ಮೊಹಮ್ಮದ್ ಶಮಿ ಸ್ಥಾನ ಪಡೆದಿದ್ದಾರೆ.

ಸ್ಪಿನ್ನರ್ ಗಳಾದ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್ ಸ್ಥಾನ ಸಿಕ್ಕಿದೆ.

ಶಾರ್ದೂಲ್ ಠಾಕೂರ್ ಅವರನ್ನು ಕೈಬಿಡಲಾಗಿದ್ದು, ಅವರ ಜಾಗದಲ್ಲಿ ಉಮೇಶ್ ಯಾದವ್‍ಗೆ ಸ್ಥಾನ ಸಿಕ್ಕಿದೆ. ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 3ರವರೆಗೆ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ನಾಲ್ಕು ದಿನಗಳ ಪದ್ಯದಲ್ಲಿ ಭಾರತ ಎ ತಂಡದಲ್ಲಿ ಶಾರ್ದೂಲ್ ಠಾಕೂರ್ ಅವರಿಗೆ ಸ್ಥಾನ ಸಿಕ್ಕಿದೆ.

ಸೆಪ್ಟೆಂಬರ್ 17 ರಂದು ಚೆನ್ನೈನಲ್ಲಿ ಮೊದಲ ಏಕದಿನ ಪಂದ್ಯ ನಡೆದರೆ ಅಕ್ಟೋಬರ್ 1ರಂದು ಐದನೇ ಏಕದಿನ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಲಿದೆ.

ಟೀ ಇಂಡಿಯಾ ಪಟ್ಟಿ:
ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಮನೀಷ್ ಪಾಂಡೆ, ಕೇದಾರ್ ಜಾದವ್, ಅಂಜಿಕ್ಯಾ ರೆಹಾನೆ, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚಹಲ್, ಜಸ್‍ಪ್ರಿತ್ ಬೂಮ್ರಾ, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಮೊಹಮ್ಮದ್ ಶಮಿ.

Leave a Reply

Your email address will not be published. Required fields are marked *