ಚಿತ್ರದುರ್ಗ: ಪತಿ ಕುಟುಂಬಸ್ಥರ ವರದಕ್ಷಿಣೆ (Dowry) ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದು, ಪತ್ನಿ ಸಾವಿನಿಂದ ನೊಂದ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಪ್ರವಲ್ಲಿಕ (25) ನೇಣಿಗೆ ಶರಣಾದ ಪತ್ನಿ. ಸುದರ್ಶನ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ. ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಸುದರ್ಶನ್ ಅಸ್ವಸ್ಥಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಪ್ರಕರಣ ಸಂಬಂಧ ಪತಿ ಸುದರ್ಶನ್ ರೆಡ್ಡಿ, ಮಾವ ಶಿವಾ ರೆಡ್ಡಿ, ಅತ್ತೆ ರಾಜೇಶ್ವರಿ ಹಾಗೂ ಮತ್ತಿತರೆ ಕುಟುಂಬಸ್ಥರ ವಿರುದ್ಧ ದೂರು ದಾಖಲಾಗಿದೆ. ಇದನ್ನೂ ಓದಿ: 6 ತಿಂಗಳ ಬಳಿಕ ಮುಖಾಮುಖಿಯಾಗಲಿದ್ದಾರೆ ದರ್ಶನ್- ಪವಿತ್ರಾ ಗೌಡ
Advertisement
Advertisement
ಸುದರ್ಶನ್ ರೆಡ್ಡಿ ಹಾಗೂ ಪ್ರವಲ್ಲಿಕ 1 ವರ್ಷದ ಹಿಂದೆ ಮದುವೆ ಆಗಿದ್ದರು. ಸುದರ್ಶನ್ ಮೊಳಕಾಲ್ಮೂರಲ್ಲಿ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ಗಿರಿಜಯ್ಯನಹಟ್ಟಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ, ಸಿಪಿಐ ವಸಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ಬೀದರ್ ಬಂದ್‌ಗೆ ಕರೆ; ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ
Advertisement