– ಸಭೆಗೆ ಸಿಎಂ ಇಬ್ರಾಹಿಂ ಗೈರು
ರಾಮನಗರ: ಬಿಜೆಪಿ ಜೊತೆಗಿನ ಮೈತ್ರಿಗೆ (BJP-JDS Alliance) ಜೆಡಿಎಸ್ ಹಾಲಿ ಶಾಸಕರು, ವಿಧಾನಪರಿಷತ್ ಸದಸ್ಯರು ಸರ್ವಾನುಮತದ ಒಪ್ಪಿಗೆ ಸೂಚಿಸಿದ್ದಾರೆ.
Advertisement
ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಜೆಡಿಎಸ್ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡ ಹಿನ್ನೆಲೆ, ಪಕ್ಷದ ಡ್ಯಾಮೇಜ್ ಕಂಟ್ರೋಲ್ ಮಾಡಲು ಖುದ್ದು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡರೇ (HD Devegowda) ಅಖಾಡಕ್ಕಿಳಿದಿದ್ದಾರೆ. ಜೆಡಿಎಸ್ ಹಾಲಿ ಶಾಸಕರು, ವಿಧಾನ ಪರಿಷತ್ ಸದಸ್ಯರ ಸಭೆ ಕರೆದು ಮೈತ್ರಿಗೆ ಸರ್ವಾನುಮತದಿಂದ ಒಪ್ಪಿಗೆ ಪಡೆದಿದ್ದಾರೆ. ಈ ಮೂಲಕ ಬಿಜೆಪಿ ಜೊತೆಗಿನ ಮೈತ್ರಿಯ ಉದ್ದೇಶದ ಕುರಿತು ಪಕ್ಷದ ನಾಯಕರ ಮನವೊಲಿಸುವ ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಅವರ ಪ್ರಯತ್ನ ಸಕ್ಸಸ್ ಆಗಿದೆ.
Advertisement
Advertisement
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಹೊಂದಾಣಿಕೆ ಮಾಡಿಕೊಂಡಿರೋ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ಅಸಮಾಧಾನದ ಬಿಸಿ ತಟ್ಟಿದೆ. ಮೈತ್ರಿಗೆ ಜೆಡಿಎಸ್‌ನ (JDS) ಕೆಲ ಶಾಸಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮೈತ್ರಿಯ ಅನಿವಾರ್ಯತೆ ಹಾಗೂ ಪಕ್ಷದಲ್ಲಿನ ಗೊಂದಲ ನಿವಾರಿಸಲು ಖುದ್ದು ದೊಡ್ಡಗೌಡರೇ ಸಭೆ ನಡೆಸಿ ಶಾಸಕರಿಗೆ ಮೈತ್ರಿಯ ಉದ್ದೇಶ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಎಚ್ಚರಿಕೆಯಿಂದಿರಿ, ಮತಕ್ಕಾಗಿ ಒಂದು ಸಮಾಜವನ್ನು ಓಲೈಕೆ ಮಾಡುವ ಅವಶ್ಯಕತೆ ನನಗಿಲ್ಲ: HDK
Advertisement
ಬಿಡದಿಯ ಕೇತಗಾನಹಳ್ಳಿ ತೋಟದ ಮನೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಂಬಂಧ ನಡೆದ ಸಭೆಯಲ್ಲಿ 19 ಶಾಸಕರ ಪೈಕಿ 17 ಜನ ಶಾಸಕರು ಹಾಜರಾಗಿದ್ದಾರೆ. ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೆಗೌಡ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim), ಹನೂರು ಶಾಸಕ ಮಂಜುನಾಥ್, ಗುರುಮಿಟ್ಕಲ್ ಶಾಸಕ ಶರಣಗೌಡ ಕುಂದಕೂರ್ ಗೈರಾಗಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರದ ನಿಲುವನ್ನು ಸಮರ್ಥಿಸುತ್ತೇನೆ – ಕಾವೇರಿ ಸಮಸ್ಯೆ ಪರಿಹಾರಕ್ಕೆ ಸಂಕಷ್ಟ ಸೂತ್ರ ರಚನೆಯಾಗಬೇಕು: SM ಕೃಷ್ಣ
ಒಟ್ಟಿನಲ್ಲಿ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಪ್ರಯತ್ನದ ಫಲವಾಗಿ ಮೈತ್ರಿಗೆ ಸರ್ವಾನುಮತದ ಒಪ್ಪಿಗೆ ಪಡೆದಿದ್ದಾರೆ. ಆದ್ರೆ 2024ರ ಲೋಕಸಭಾ ಚುನಾವಣೆಗೆ ಈ ಮೈತ್ರಿ ಎಷ್ಟರಮಟ್ಟಿಗೆ ಫಲ ಕೊಡುತ್ತದೆ ಎಂಬುದನ್ನ ಕಾದು ನೋಡಬೇಕು.
Web Stories