ಶಿವಮೊಗ್ಗ: ರಾಜ್ಯ ಸರ್ಕಾರ ಗ್ಯಾರಂಟಿ ಕಾರ್ಯಕ್ರಮದ ಮೂಲಕ ಬಡವರ ಜೇಬಿಗೆ ಕನ್ನ ಹಾಕುತ್ತಿದೆ. ಅಘೋಷಿತ ಲೋಡ್ ಶೆಡ್ಡಿಂಗ್ (Load Shedding) ಆರಂಭಗೊಂಡಿದೆ. ಇದರಿಂದ ರೈತರು (Farmers) ಬೇಸತ್ತಿದ್ದಾರೆ. ಬೆಳೆ ಉಳಿಸಿಕೊಳ್ಳಲು ವಿದ್ಯುತ್ (Electricity) ಸಿಗುತ್ತಿಲ್ಲ. ಅಕ್ಕಪಕ್ಕದ ರಾಜ್ಯದಿಂದ ವಿದ್ಯುತ್ ಖರೀದಿಸಿ ಕೊಡಬೇಕು ಎಂದು ಸಂಸದ ಬಿವೈ ರಾಘವೇಂದ್ರ (BY Raghavendra) ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನೆಟ್‌ವರ್ಕ್‌ಗಾಗಿ 300 ಕೋಟಿ ರೂ. ಅನುದಾನ ನೀಡಿದೆ. ಮಲೆನಾಡು ಭಾಗದಲ್ಲಿ ಆದ್ಯತೆ ನೀಡಲಾಗುತ್ತಿದೆ. ಡಿಸೆಂಬರ್ ಒಳಗಾಗಿ 100 ಟವರ್ ಸ್ಥಾಪನೆ ಆಗಲಿದೆ. ಮುಂದಿನ ದಿನಗಳಲ್ಲಿ ಉಳಿದ ಎಲ್ಲಾ ಕಡೆ ಟವರ್ ನಿರ್ಮಿಸಲಾಗುವುದು. ಶಿವಮೊಗ್ಗ ಕ್ಷೇತ್ರದ ಟವರ್‌ಗಳಿಗೆ 100 ಬ್ಯಾಟರಿ ಮಂಜೂರಾಗಿದೆ. ಇದರಿಂದ ಜನರೇಟರ್ ಅವಲಂಬನೆಗೆ ಮುಕ್ತಿ ಸಿಗಲಿದೆ ಎಂದರು. ಇದನ್ನೂ ಓದಿ: ಕೆಲಸ ಮಾಡ್ಬೇಕು ಅಂದ್ರೆ ವೋಟ್ ಹಾಕ್ಬೇಕು ಅನ್ನೋದರಲ್ಲಿ ತಪ್ಪೇನಿದೆ?: ಬಾಲಕೃಷ್ಣ ಸಮರ್ಥನೆ
Advertisement
Advertisement
ರೈತ ನಾಯಕ ಯಡಿಯೂರಪ್ಪ ನೇತೃತ್ವದಲ್ಲಿ ಏತ ನೀರಾವರಿ ಮಾಡಿದ್ದೇವೆ. ಶಿಕಾರಿಪುರ ತಾಲೂಕಿನಲ್ಲಿ ಈ ಯೋಜನೆ ಪೂರ್ಣಗೊಂಡಿದೆ. ಈ ಯೋಜನೆಗಳಿಗೆ 24 ಗಂಟೆ ವಿದ್ಯುತ್ ಪೂರೈಸಿದರೆ ಕೆರೆಗಳಿಗೆ ನೀರು ಸಿಗಲಿದೆ ಎಂದು ಹೇಳಿದರು. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳ ತಜ್ಞರಿಂದ ಅಭಿಪ್ರಾಯ ಪಡೆದು ಹೊಸ ಶಿಕ್ಷಣ ನೀತಿ ಆರಂಭಿಸಿದೆ. ಆದರೆ ರಾಜ್ಯ ಸರ್ಕಾರ ಅದನ್ನು ಕೈಬಿಟ್ಟು ಪ್ರತ್ಯೇಕ ಶಿಕ್ಷಣ ನೀತಿ ಅಳವಡಿಸುತ್ತಿದೆ. ಇದರಿಂದ ಸರ್ಕಾರಿ ಮಕ್ಕಳಿಗೆ ಅನ್ಯಾಯ ಆಗುತ್ತಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳು ತೊಂದರೆ ಅನುಭವಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಂಚರಾಜ್ಯಗಳ ಚುನಾವಣೆ ಘೋಷಣೆ – ರಾಜ್ಯ ಬಿಜೆಪಿ ಶಾಸಕರಿಗೆ ಹೈಕಮಾಂಡ್ ಜವಾಬ್ದಾರಿ ಹಂಚಿಕೆ
Advertisement
Web Stories