ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊಥಗುಡೆಂ (Bhadrachalam of Bhadradri) ಜಿಲ್ಲೆಯ ಭದ್ರಾಚಲಂನಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದಿದ್ದು (Building Collapses), ಅವಶೇಷಗಳ ಅಡಿಯಲ್ಲಿ ಇಬ್ಬರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ಭದ್ರಾಚಲಂ ಎಎಸ್‌ಪಿ ವಿಕ್ರಾಂತ್ ಕುಮಾರ್ ಸಿಂಗ್, ಬುಧವಾರ ಮಧ್ಯಾಹ್ನ 2:30ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಐಎಎಸ್ ಅಧಿಕಾರಿ ಅಂತ ಹೇಳ್ಕೊಂಡು ದೇಶ್ಯಾದ್ಯಂತ 20ಕ್ಕೂ ಅಧಿಕ ಮಹಿಳೆಯರಿಗೆ ವಂಚನೆ
#WATCH | Telangana: A six-storey under-construction building collapsed in Bhadrachalam of Bhadradri Kothagudem district. The police reached the spot and are carrying out an investigation into the incident. (26.03) https://t.co/x1RQifvylk pic.twitter.com/kekVjN8noh
— ANI (@ANI) March 26, 2025
ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿದಿದ್ದು, ಇಬ್ಬರು ಅವಶೇಷಗಳ ಅಡಿಯಲ್ಲೇ ಸಿಲುಕಿರುವ ಶಂಕೆಯಿದೆ. ನಮಗೆ ಮಾಹಿತಿ ಬಂದ ತಕ್ಷಣ ನಾವು ತಕ್ಷಣ ಸ್ಥಳಕ್ಕೆ ಧಾವಿಸಿದ್ದೇವೆ. ಕೂಡಲೇ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳನ್ನು ಸಂಪರ್ಕಿಸಿ, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್ ಮತ್ತೆ ಹೊಸ ಬಾಂಬ್
ಕಾರ್ಯಾಚರಣೆ ಸಂರ್ಭದಲ್ಲಿ ಇಬ್ಬರು ಸಿಕ್ಕಿದ್ದಾರೆ. ಮತ್ತೊಬ್ಬರು ಹೆಣ್ಣಿನ ಧ್ವನಿ ಕೇಳುತ್ತಿದೆ. ಶೀಘ್ರದಲ್ಲೇ ಆಕೆಯನ್ನೂ ರಕ್ಷಿಸುತ್ತೇವೆ. ಅಲ್ಲಿವರೆಗೂ ರಕ್ಷಣಾ ಕಾರ್ಯಾಚರಣೆ ನಡೆಯಲಿದೆ ಎಂದು ಎಎಸ್ಪಿ ಸಿಂಗ್ ತಿಳಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ – 18 ಅಡಿ ಉದ್ದದ ಸರಳಲ್ಲಿ ಬಾಯಿ ಬೀಗ