ಆನೇಕಲ್: ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ (Under Construction Of School Building) ಕುಸಿದು 20ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಸೆಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ಎರಡನೇ ಅಂತಸ್ತಿನ ಕಟ್ಟಡ ಕುಸಿದು ಕಾರ್ಮಿಕರು ಗಾಯಗೊಂಡಿದ್ದಾರೆ. ಐವರು ಕಾರ್ಮಿಕರ (labours) ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸಚಿನ್ ತೆಂಡೂಲ್ಕರ್ ಡೀಪ್‍ಫೇಕ್ ವೀಡಿಯೋ ಪ್ರಕರಣ- ಗೇಮ್ ಅಪ್ಲಿಕೇಶನ್ ವಿರುದ್ಧ ಎಫ್‍ಐಆರ್
Advertisement
Advertisement
ಕಟ್ಟಡದ ಅವಶೇಷಗಳ ಅಡಿಯಲ್ಲಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ: ಐಸಿಸ್ ಜೊತೆ ನಂಟು; 2014 ರಲ್ಲಿ ಬಂಧಿತನಾಗಿದ್ದ ಟೆಕ್ಕಿ ದೋಷಿ ಎಂದು ಕೋರ್ಟ್ ತೀರ್ಪು
Advertisement
Advertisement
ಗಾಯಗೊಂಡ ಕಾರ್ಮಿಕರು ಕೋಲ್ಕತ್ತಾ ಮೂಲದವರು. ಒಟ್ಟು ನೂರಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದೆವು. 2ನೇ ಮಹಡಿಯಲ್ಲಿ ಸೆಂಟ್ರಿಂಗ್ ಕಾಂಕ್ರೀಟ್ ಹಾಕಲಾಗುತ್ತಿತ್ತು. ಈ ಸಮಯದಲ್ಲಿ ಭಾರ ಹೆಚ್ಚಾಗಿ ಹೆಚ್ಚಾಗಿ ಸಿಮೆಂಟ್ ಹಾಗೂ ಕಬ್ಬಿಣ ಕುಸಿದಿದೆ. ಸ್ಥಳದಲ್ಲಿದ್ದ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರ ಪೈಕಿ 5 ಮಂದಿ ಸ್ಥತಿ ಗಂಭೀರವಾಗಿದೆ. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಸ್ಥಳದಲ್ಲಿ ಕೆಲಸ ಮಾಡುವ ಕಾರ್ಮಿಕರೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ; ಅಯೋಧ್ಯೆಯಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳ ಬಂಧನ