ಮುಂಬರುವ T20 ವಿಶ್ವಕಪ್ 2024 ರಲ್ಲಿ ರೋಹಿತ್ ಶರ್ಮಾ (Rohit Sharma) ಭಾರತವನ್ನು ಮುನ್ನಡೆಸಲಿದ್ದಾರೆ. ಟಿ-20 ವಿಶ್ವಕಪ್‌ನಲ್ಲಿ ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಆಡಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (BCCI secretary Jay Shah) ಬುಧವಾರ ಹೇಳಿದ್ದಾರೆ. ಹಾರ್ದಿಕ್ ಪಾಂಡ್ಯ ಉಪನಾಯಕನಾಗಿದ್ದು, ರಾಹುಲ್ ದ್ರಾವಿಡ್ (Rahul Dravid) ಕೋಚ್ ಆಗಲಿದ್ದಾರೆ.
ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂಗೆ ಬಿಸಿಸಿಐನ ಮಾಜಿ ಕಾರ್ಯದರ್ಶಿ ನಿರಂಜನ್ ಶಾ (Niranjan Shah) ಅವರ ಹೆಸರಿಡುವ ಕಾರ್ಯಕ್ರಮದ ವೇಳೆ ಜಯ್ ಶಾ ಅವರು, 2023ರಲ್ಲಿ ಅಹಮದಾಬಾದ್‌ನಲ್ಲಿ ಸತತ 10 ಗೆಲುವಿನ ನಂತರ ನಾವು ವಿಶ್ವಕಪ್ ಗೆಲ್ಲಲು ಸಾಧ್ಯವಾಗಲಿಲ್ಲ, ಆದರೆ ನಾವು ಹೃದಯವನ್ನು ಗೆದ್ದಿದ್ದೇವೆ ಎಂದು ಹೇಳಿದರು. 2024ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಬಾರ್ಬಡೋಸ್‌ನಲ್ಲಿ ಭಾರತದ ಧ್ವಜವನ್ನು ಹಾರಿಸುವ ಭರವಸೆ ನೀಡುವುದಾಗಿ ತಿಳಿಸಿದರು.
Advertisement
Advertisement
ಈ ವೇಳೆ ನಿರಂಜನ್ ಶಾ, ಮಾಜಿ ನಾಯಕ ಸುನಿಲ್ ಗವಾಸ್ಕರ್, ಅನಿಲ್ ಕುಂಬ್ಳೆ ಮತ್ತು ಐಪಿಎಲ್ ಅಧ್ಯಕ್ಷ ಅರುಣ್ ಧುಮಾಲ್, ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಅಕ್ಷರ್ ಪಟೇಲ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮುಸ್ಲಿಂ ರಾಷ್ಟ್ರದಲ್ಲಿ ಹಿಂದೂ ದೇಗುಲ ಉದ್ಘಾಟಿಸಿದ PM ಮೋದಿ- ಫೋಟೋಗಳಲ್ಲಿ ನೋಡಿ
Advertisement
Advertisement