ಬೆಳಗಾವಿ: ಹಿಂಡಲಗಾ ಜೈಲಿನಲ್ಲಿ (Jail) ಆತ್ಮಹತ್ಯೆಗೆ ಯತ್ನಿಸಿದ್ದ ವಿಚಾರಣಾಧೀನ ಕೈದಿ ಮೃತಪಟ್ಟಿರುವ ಘಟನೆ ಬೆಳಗಾವಿ (Belagavi) ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ಕಿತ್ತೂರು ತಾಲೂಕಿನ ಬಚ್ಚನಕೇರಿಯ ಮಂಜುನಾಥ್ ನಾಯ್ಕರ(20) ಆತ್ಮಹತ್ಯೆ ಮಾಡಿಕೊಂಡ ಕೈದಿ. ಮಂಜುನಾಥ್ ಮೂರು ತಿಂಗಳ ಹಿಂದಷ್ಟೇ ಪೋಕ್ಸೋ ಕೇಸ್ ಅಡಿಯಲ್ಲಿ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹ ಸೇರಿದ್ದ. ಆದರೆ ನಿನ್ನೆ ಮಂಜುನಾಥ್ ಜೈಲಿನ ಪಾಳುಬಿದ್ದ ಕೊಠಡಿಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದನು. ಇದನ್ನೂ ಓದಿ: ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋದ ಪ್ರಕರಣ – ಇಬ್ಬರ ಮೃತದೇಹ ಪತ್ತೆ
ತಕ್ಷಣವೇ ಗಮನಿಸಿದ ಸಹ ಕೈದಿಗಳಿಂದ ಜೈಲು ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಮಂಜುನಾಥ್‌ನನ್ನು ಅಂಬುಲೆನ್ಸ್ ಮೂಲಕ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಮಂಜುನಾಥ್ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಖಾದಿ, ಕರಕುಶಲ ವಸ್ತುಗಳನ್ನು ಹೆಚ್ಚು ಖರೀದಿಸಿ – ರಾಜ್‌ಘಾಟ್‌ನಲ್ಲಿ ಗಾಂಧಿ ಸಮಾಧಿಗೆ ಮೋದಿ ಗೌರವ ನಮನ