ಕೋಲಾರ: ಭೂಗತ ಪಾತಕಿ ರವಿ ಪೂಜಾರಿ (Ravi Pujari) ಸಹಚರನನ್ನು ಕೋಲಾರ ಪೊಲೀಸರ ತಂಡ ಉತ್ತರ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಆರೋಪಿ ಕವಿರಾಜ್‌ನನ್ನು ಯುಪಿಯ ನೋಯ್ಡಾ ನಗರದಲ್ಲಿ ಬಂಧಿಸಲಾಗಿದೆ. ದೇಶಾದ್ಯಂತ ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ. ಇದನ್ನೂ ಓದಿ: ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್, ಪುತ್ರ ಸಾವು
ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಡ್ನ್ಯಾಪ್ ಪ್ರಕರಣ ಸೇರಿ 14 ಪ್ರಕರಣಗಳಲ್ಲಿ ಆರೋಪಿಯಾಗಿದ್ದ. ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ದೆಹಲಿ, ಉತ್ತರಾಖಂಡ, ಉತ್ತರ ಪ್ರದೇಶದಲ್ಲಿ ಹುಡುಕಾಡಿ ಆರೋಪಿಯನ್ನು ಬಂಧಿಸಲಾಗಿದೆ.
ಕೋಲಾರ ಸೆನ್ ಸಿಪಿಐ ಎಸ್.ಆರ್.ಜಗದೀಶ್ ನೇತೃತ್ವದ ತಂಡದಿಂದ ಕವಿರಾಜ್ ಬಂಧನವಾಗಿದೆ. ಬಂಧಿತ ಆರೋಪಿಯನ್ನು ಕೋಲಾರ ಸತ್ರ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದೆ. ಇದನ್ನೂ ಓದಿ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕ ಬಾವಿಯಲ್ಲಿ ಶವವಾಗಿ ಪತ್ತೆ