ಮುಂಬೈ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಮೂರು ವರ್ಷದ ಮಗನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ನಿರುದ್ಯೋಗಿಯಾಗಿದ್ದ ವ್ಯಕ್ತಿ, ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ತನ್ನ ಹೆಂಡತಿ ಕೆಲಸದ ಸ್ಥಳದಲ್ಲಿ ಯಾರೊಂದಿಗೋ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನ ಹೊಂದಿದ್ದನು. ಹೀಗಾಗಿ ತನ್ನ ಪತ್ನಿ ಹಾಗೂ ಮಗುವಿನ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ. ಈ ವೇಳೆ ನೆರೆಹೊರೆಯವರು ದಾವಿಸಿ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಮತ್ತು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ: ಸತೀಶ್ ಜಾರಕಿಹೊಳಿ
ಸದ್ಯ ಮಹಿಳೆ ಸ್ಥಿತಿ ಸ್ಥಿರವಾಗಿದ್ದು, ಆಕೆಯ ಮುಖ ಮತ್ತು ಎದೆಗೆ ಗಂಭೀರ ಗಾಯಗಳಾಗಿದೆ ಮತ್ತು ಮಗುವಿನ ತುಟಿಗೆ ಸುಟ್ಟಗಾಯಗಳಿವೆ. ದಂಪತಿ ಆಗಾಗ ಜಗಳವಾಡುತ್ತಿದ್ದರು. ಹೀಗಾಗಿ ಎರಡು ವರ್ಷಗಳಿಂದ ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಮಹಿಳೆ ಕೆಲಸಕ್ಕೆ ಹೋಗುವ ಮುನ್ನ ತನ್ನ ಮಗನನ್ನು ತಾಯಿಯ ಮನೆಗೆ ಬಿಡುತ್ತಿದ್ದಳು. ಇದನ್ನೂ ಓದಿ: ಮರಾಠಿ ಬೋರ್ಡ್ ಹಾಕಿ ಇಲ್ಲದಿದ್ದರೆ ಕನ್ನಡ ನಾಮಫಲಕ ಇರಲ್ಲ ಎಂದು MES ಪುಂಡಾಟ – ಸ್ವಯಂ ದೂರು ದಾಖಲಿಸಿಕೊಂಡ ಪೊಲೀಸರು