ನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ ಸಿಜೆಐ ಸೂರ್ಯ ಕಾಂತ್ (Surya Kant) ಅವರು ಕಿಡಿಕಾರಿದ್ದಾರೆ.
ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠದ ಮುಂದೆ ವಕೀಲರೊಬ್ಬರನ್ನು ಹಿರಿಯ ವಕೀಲರನ್ನಾಗಿ ನೇಮಿಸುವ ಬಗ್ಗೆ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ʻಒಂಚೂರು ಸತ್ಯವಿಲ್ಲʼ – ವಿದೇಶಿ ಪ್ರಯಾಣದ ಮೇಲೆ ತೆರಿಗೆ ಕುರಿತ ವರದಿ ತಿರಸ್ಕರಿಸಿದ ಮೋದಿ
ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಹಿರಿಯ ವಕೀಲ ಹುದ್ದೆಯನ್ನು ನೀಡಿದರೆ, ಅವರ ವೃತ್ತಿಪರ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸುತ್ತದೆ ಎಂದು ಸಿಜೆಐ ಸೂರ್ಯ ಕಾಂತ್ ತಿಳಿಸಿದ್ದಾರೆ.
ವಕೀಲರ ಸಾಮಾಜಿಕ ಮಾಧ್ಯಮ ನಡವಳಿಕೆಯನ್ನು ಉಲ್ಲೇಖಿಸಿದ ಸಿಜೆಐ, ಸಮಾಜದಲ್ಲಿ ಈಗಾಗಲೇ ವ್ಯವಸ್ಥೆಯ ಮೇಲೆ ದಾಳಿ ಮಾಡುವ ಪರಾವಲಂಬಿಗಳು ಇದ್ದಾರೆ. ನೀವು ಅವರೊಂದಿಗೆ ಕೈಜೋಡಿಸಲು ಬಯಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.
ಯುವಕರು ಜಿರಳೆಗಳಂತೆ ಇದ್ದಾರೆ. ಅವರಿಗೆ ಯಾವುದೇ ಉದ್ಯೋಗ ಸಿಗುವುದಿಲ್ಲ. ವೃತ್ತಿಯಲ್ಲಿ ಯಾವುದೇ ಸ್ಥಾನವಿಲ್ಲ. ಅವರಲ್ಲಿ ಕೆಲವರು ಮಾಧ್ಯಮ, ಸಾಮಾಜಿಕ ಮಾಧ್ಯಮ, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಶ್ಚಿಮ ಏಷ್ಯಾ ಬಿಕ್ಕಟ್ಟು ಪರಿಹಾರಕ್ಕೆ ಭಾರತವೇ ಸೂಕ್ತ: ರಷ್ಯಾ ವಿದೇಶಾಂಗ ಸಚಿವ

