ಮೈಸೂರು: ಉಡುಪಿಯ (Udupi) ಮಾಜಿ ಶಾಸಕ ರಘುಪತಿ ಭಟ್ (Raghupati Bhat) ಅವರಿಗೆ ಎಂಎಲ್‌ಸಿ ಟಿಕೆಟ್ ನೀಡದ್ದಕ್ಕೆ ಪರೋಕ್ಷವಾಗಿ ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಅವರು, ಉಡುಪಿ ಶಾಲೆಯೊಂದರಲ್ಲಿ ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್ ಟಿಕೆಟ್ ಸಿಗಲಿಲ್ಲ ಎಂಎಲ್‌ಸಿ ಟಿಕೆಟ್ಟನ್ನೂ ಕೊಡಲಿಲ್ಲ. ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: Election Results – ಟ್ರೆಂಡ್ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ
ರಘುಪತಿ ಭಟ್ ಅವರಿಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿತ್ತು. ಉಡುಪಿಯಲ್ಲಿ ಯಶ್‌ಪಾಲ್ ಸುವರ್ಣ ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ಚುನಾವಣೆಯಲ್ಲಿ ಗೆದ್ದಿದ್ದರು.
ಎಂಎಲ್‌ಎ ಟಿಕೆಟ್ ನೀಡದ ಕಾರಣ ಈ ಬಾರಿ ಪದವೀಧರ ಶಿಕ್ಷಕರ ಕ್ಷೇತ್ರ ಟಿಕೆಟ್ ಸಿಗಬಹುದು ಎಂದು ಎಂಬ ನಿರೀಕ್ಷೆಯಲ್ಲಿ ರಘುಪತಿ ಭಟ್ಟರಿದ್ದರು. ರಘುಪತಿ ಭಟ್‌ಗೆ ಈ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದಾರೆ. ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದಕ್ಕೆ ಬಿಜೆಪಿ ರಘುಪತಿ ಭಟ್ಟರನ್ನು ಪಕ್ಷದಿಂದ 6 ವರ್ಷ ಉಚ್ಚಾಟನೆ ಮಾಡಿದೆ. ಇದನ್ನೂ ಓದಿ: ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್ ದರ ಏರಿಕೆ