ಸಾವರ್ಕರ್, ಹೆಡ್ಗೆವಾರ್ ಅವರ ಅಧ್ಯಾಯಗಳನ್ನು ಪಠ್ಯದಿಂದ ತೆಗೆದು ಹಾಕಿರುವುದು ದುರದೃಷ್ಟಕರ: ನಿತಿನ್ ಗಡ್ಕರಿ

Public TV
2 Min Read
NITIN GADKARI

ನವದೆಹಲಿ: ಡಾ.ಹೆಡ್ಗೆವಾರ್ (Dr.Hedgewar) ಮತ್ತು ಸ್ವತಂತ್ರ ವೀರ ಸಾವರ್ಕರ್ (Veer Savarkar) ಅವರ ಅಧ್ಯಾಯಗಳನ್ನು ಪಠ್ಯಪುಸ್ತಕಗಳಿಂದ (Textbook) ತೆಗೆದು ಹಾಕಿರುವುದು ದುರದೃಷ್ಟಕರ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿಕೆ ನೀಡಿದ್ದಾರೆ.

ಶನಿವಾರ ನಡೆದ ವಿಡಿ ಸಾವರ್ಕರ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ (Textbook Revise) ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಟೀಕಿಸಿದರು. ಅಲ್ಲದೇ ಇದಕ್ಕಿಂತ ನೋವಿನ ಸಂಗತಿ ಇನ್ನೊಂದಿಲ್ಲ ಎಂದರು. ಇದನ್ನೂ ಓದಿ: ಬಿಜೆಪಿ ಅವಧಿಯ ಪಠ್ಯಗಳಿಗೆ ಸರ್ಕಾರ ಕತ್ತರಿ- ಹೆಡ್ಗೆವಾರ್, ಸಾವರ್ಕರ್, ಸೂಲಿಬೆಲೆ ಪಠ್ಯಕ್ಕೆ ಬ್ರೇಕ್

TEXTBOOK

ಕರ್ನಾಟಕ ಸರ್ಕಾರ 6ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಮತ್ತು ಕನ್ನಡ ಪಠ್ಯಪುಸ್ತಕಗಳ ಪರಿಷ್ಕರಣೆಯಲ್ಲಿ ಆರ್‌ಎಸ್‌ಎಸ್ (RSS) ಸಂಸ್ಥಾಪಕ ಹೆಡ್ಗೆವಾರ್ ಮತ್ತು ಹಿಂದುತ್ವದ ಸಿದ್ಧಾಂತವನ್ನು ಹೊಂದಿದ್ದ ವಿಡಿ ಸಾವರ್ಕರ್ ಅವರ ಅಧ್ಯಾಯಗಳನ್ನು ಕೈಬಿಡಲು ಕರ್ನಾಟಕ ಕ್ಯಾಬಿನೆಟ್ ಗುರುವಾರ ಅನುಮೋದನೆ ನೀಡಿದ ಬಳಿಕ ನಿತಿನ್ ಗಡ್ಕರಿ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ 2 ರಾಜ್ಯಗಳು – ಸರ್ಕಾರಕ್ಕೆ ಮತ್ತಷ್ಟು ತಲೆನೋವು

ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಶಾಲಾ ಪಠ್ಯಕ್ರಮದಿಂದ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡ್ಗೆವಾರ್ ಮತ್ತು ವಿಡಿ ಸಾವರ್ಕರ್ ಅವರ ಪಠ್ಯಗಳನ್ನು ಕೈಬಿಡುವುದಾಗಿ ಜೂನ್ 15ರಂದು ಘೋಷಣೆ ಮಾಡಿದ್ದರು. ಕೆಬಿ ಹೆಡ್ಗೆವಾರ್ ಅವರ ಪಠ್ಯಕ್ರಮವನ್ನು ಕೈಬಿಡಲಾಗಿದೆ. ಕಳೆದ ವರ್ಷ ಬಿಜೆಪಿ (BJP) ಸರ್ಕಾರ ಏನೇ ಬದಲಾವಣೆಗಳನ್ನು ತಂದಿದ್ದರೂ ಸಹಿತ ನಾವು ಅದನ್ನು ಬದಲಾಯಿಸಿ ಮರುಪರಿಚಯಿಸಿದ್ದೇವೆ. ಎಲ್ಲಾ ವಿವರಗಳು ಶೀಘ್ರವೇ ಲಭ್ಯವಾಗಲಿದೆ ಎಂದರು. ಇದನ್ನೂ ಓದಿ: PublicTV Explainer: ಗೃಹಜ್ಯೋತಿ ಗ್ಯಾರಂಟಿ- ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ

ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತಿರುವ ಸಿದ್ದರಾಮಯ್ಯ (Siddaramaiah) ಸರ್ಕಾರ ಶಾಲಾ ಪಠ್ಯಪುಸ್ತಕಗಳ ಪಠ್ಯಕ್ರಮಗಳನ್ನು ಪರಿಷ್ಕರಣೆ ಮಾಡುವ ಸಲುವಾಗಿ ಸಂಪುಟ ಸಭೆ ನಡೆಸಿದ್ದು, 10ನೇ ತರಗತಿ ಕನ್ನಡ ಪಠ್ಯಪುಸ್ತಕದಿಂದ ಹೆಡ್ಗೆವಾರ್ ಮತ್ತು ಸಾವರ್ಕರ್ ಅಧ್ಯಾಯಗಳನ್ನು ರದ್ದುಗೊಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಸೇರುವುದಕ್ಕಿಂತ ಬಾವಿಗೆ ಹಾರೋದೇ ಲೇಸು ಎಂದಿದ್ದೆ: ನಿತಿನ್ ಗಡ್ಕರಿ

Share This Article