ಬೆಂಗಳೂರು: ಬಾಗಲೂರು ಸಮೀಪದ ಮಂಚಪ್ಪನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರಿನೊಳಗೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕಾರಿನ ಮುಂದಿನ ಸೀಟಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಬುಲೆಟ್ ಕೂಡ ಸಿಕ್ಕಿದೆ.
ನಿನ್ನೆ ರಾತ್ರಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.ಇದನ್ನೂ ಓದಿ: ಸೌಜನ್ಯ ಕೇಸ್ | ಸುಪ್ರೀಂ ಆದೇಶದಂತೆ ಮೆಡಿಕಲ್ ಬೋರ್ಡ್ ರಚಿಸಿದ SIT
ಘಟನಾ ಸ್ಥಳಕ್ಕೆ ಬಾಗಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳದಲ್ಲಿ ಸಿಕ್ಕಿರುವ ಬುಲೆಟ್ ಸೇರಿದಂತೆ ಹಲವು ಸಾಕ್ಷ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಇದನ್ನೂ ಓದಿ: ಮಾಜಿ ಆಗ್ತಿದ್ದಂತೆ ದೆಹಲಿಯಲ್ಲಿ ಸಿದ್ದರಾಮಯ್ಯ ಪವರ್ ಕಡಿಮೆಯಾಯ್ತಾ?
