ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ.
ಪುಲ್ವಾಮಾದ ಡ್ರಾಬ್‍ಗ್ರಮ್ ಪ್ರದೆಶದಲ್ಲಿ 10ನೇ ತರಗತಿಯ ಬೋರ್ಡ್ ಪರೀಕ್ಷೆ ನಡೆಯುತ್ತಿದ್ದ ವೇಳೆ ಉಗ್ರರರು ದಾಳಿ ನಡೆಸಿದ್ದಾರೆ. ಪರೀಕ್ಷೆಗೆ ತೊಂದರೆಯಾಗದಂತೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಸಿಆರ್‌ಪಿಎಫ್ ಯೋಧರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.
Advertisement
#UPDATE: Additional forces have been deployed at the spot. A search operation has been launched. #JammuAndKashmir https://t.co/dRm6b5neW2
— ANI (@ANI) October 29, 2019
Advertisement
ಉಗ್ರರ ನಡುವಿನ ಈ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂಬ ಮಾಹಿತಿ ಲಭಿಸಿದ್ದು, ಉಗ್ರ ದಾಳಿಗೆ ಯೋಧರು ಪ್ರತಿದಾಳಿ ನಡೆಸಿದ್ದಾರೆ. ಉಗ್ರರು ಸುಮಾರು 6 ರಿಂದ 7 ಸುತ್ತು ಗುಂಡು ಹರಿಸಿದ್ದರು ಎಂಬ ಮಾಹಿತಿ ಲಭಿಸಿದೆ. ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸೇನೆಯನ್ನು ಕರೆಯಿಸಿಕೊಂಡಿರುವ ಪೊಲೀಸರು, ಪ್ರದೇಶವನ್ನು ಸುತ್ತುವರೆದು ಸರ್ಚ್ ಆಪರೇಷನ್ ನಡೆಸಿದ್ದಾರೆ. ಕಾರ್ಯಾಚರಣೆ ಮುಂದುವರಿಸಿದಿದೆ.
Advertisement
#JammuAndKashmir: The delegation of European Union Parliament members met GoC 15 Corps, Lt General KJS Dhillon today in Srinagar. pic.twitter.com/UGfoyNpjDu
— ANI (@ANI) October 29, 2019
Advertisement
ಯೂರೋಪ್‍ನ ಯೂನಿಯನ್ ಸಂಸದರ ತಂಡ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಿದ್ದ ಸಮಯದಲ್ಲೇ ಉಗ್ರರು ದಾಳಿ ನಡೆಸಿದ್ದಾರೆ. ಆರ್ಟಿಕಲ್ 370 ರದ್ದು ಬಳಿಕ ಕಣಿವೆಯ ಪ್ರದೇಶದ ಸ್ಥಿತಿಗತಿ ಬಗ್ಗೆ ತಿಳಿಯಲು ಯುರೋಪಿಯನ್ ಯೂನಿಯನ್ ಸಂಸದರು ಭೇಟಿ ನೀಡಿದ್ದಾರೆ. ಜಮ್ಮು ಕಾಶ್ಮೀರದ ಸೆಪೋರ್ ಬಸ್ ನಿಲ್ದಾಣದಲ್ಲಿ ಸೋಮವಾರ ಗ್ರೇನೇಡ್ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ 19ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.