ದಾವಣಗೆರೆ: ದೇವಿ ಜಾತ್ರೆಗೆ ಹೋಗಿ ಊಟ ಮುಗಿಸಿಕೊಂಡು ಮೂವರು ಯುವಕರು ಬೈಕ್‌ನಲ್ಲಿ ರಾತ್ರಿ ಮರಳಿ ಮನೆಗೆ ಬರುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂರು ಯುವಕರು (Youth) ಸಾವನ್ನಪ್ಪಿದ ಘಟನೆ ದಾವಣಗೆರೆಯ ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ದಾವಣಗೆರೆ (Davanagere) ನಗರದ ರಾಮನಗರ ನಿವಾಸಿಗಳಾದ ಪರಶುರಾಮ್ (24) ಸಂದೇಶ (23) ಶಿವು (26) ಮೃತ ದುರ್ದೈವಿಗಳು. ದಾವಣಗೆರೆ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ದೇವಿ ಕಾರ್ಯ ಇದ್ದು, ಮಾಂಸದ ಊಟಕ್ಕೆ ಮೂರು ಯುವಕರು ಬೈಕ್ ಹೋಗಿದ್ದರು. ಊಟ ಮುಗಿಸಿಕೊಂಡು ತಡರಾತ್ರಿ ವಾಪಸ್ಸು ಮನೆಗೆ ಬರುವಾಗ ಹಿಂದೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೂರು ಯುವಕರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ
ಸಾವನ್ನಪ್ಪಿದ ಯುವಕರ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾದ್ದು, ಕುಟುಂಬಸ್ಥರ ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂಗನವಾಡಿಯಲ್ಲಿ ಬಿಸಿ ಸಾಂಬಾರ್ ಬಿದ್ದು 6 ವರ್ಷದ ಬಾಲಕಿ ಗಂಭೀರ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k