ರಾಯಚೂರು: ಕಾರಿಗೆ (Car) ಹಿಂದಿನಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ದಂಪತಿ (Couple) ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಹೊಸಳ್ಳಿ ಕ್ಯಾಂಪ್ ಬಳಿ ನಡೆದಿದೆ.
ಬಳ್ಳಾರಿಯ ಇಂದಿರಾನಗರದ 27 ವರ್ಷದ ರಾಘವೆಂದ್ರ, 26 ವರ್ಷದ ಹೇಮಲತಾ ಮೃತ ದಂಪತಿ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರವಿಕುಮಾರ್ಗೆ ಗಂಭೀರ ಗಾಯಗಳಾಗಿದ್ದು, ಸಿಂಧನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಚಾವರಿ ಬಜಾರ್ ಕಟ್ಟಡ ಕುಸಿತ ದುರಂತ – ಅವಶೇಷಗಳಡಿ ಮತ್ತೊಂದು ಮೃತದೇಹ ಪತ್ತೆ, ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಸಿಂಧನೂರಿನಿಂದ ಬಳ್ಳಾರಿಗೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾಗಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಒಂದೇ ಕುಟುಂಬದ 7 ಜನರ ಹತ್ಯೆ ಕೇಸ್; ಮರ್ಡರ್ಗೂ ಮುನ್ನ ಕ್ರೈಂ ಥ್ರಿಲ್ಲರ್ ಸಿನಿಮಾ ನೋಡಿದ್ದ ಹಂತಕ
