ನವದೆಹಲಿ: ಯಾವುದೇ ಮುಸ್ಲಿಂ ಮಹಿಳೆಯು ತನ್ನ ಪತಿ ಬೇರೆಯವರನ್ನು ಮದುವೆಯಾಗಿ ಮನೆಗೆ ಕರೆತರಲು ಬಯಸುವುದಿಲ್ಲ. ಇದರಿಂದಾಗಿ ಪ್ರತಿಯೊಬ್ಬ ಮುಸ್ಲಿಂ ಮಹಿಳೆಯೂ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಬಯಸುತ್ತಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಯಾವುದೇ ಮುಸ್ಲಿಂ ಮಹಿಳೆಯನ್ನು ಕೇಳಿ. ಏಕರೂಪ ನಾಗರಿಕ ಸಂಹಿತೆ ಬಗ್ಗೆ ಕೇವಲ ನಾನೊಬ್ಬನೇ ಹೇಳುತ್ತಿಲ್ಲ. ಇದು ಎಲ್ಲಾ ಮುಸ್ಲಿಂ ಮಹಿಳೆಯರ ಸಮಸ್ಯೆಯಾಗಿದೆ ಎಂದರು.
Advertisement
Advertisement
ಮುಸ್ಲಿಂ ಮಹಿಳೆಯರಿಗೆ ನ್ಯಾಯ ನೀಡಲು ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು. ಅವರಿಗೆ ನ್ಯಾಯ ಸಿಗಬೇಕಾದರೆ ತ್ರಿವಳಿ ತಲಾಖ್ ರದ್ದುಗೊಳಿಸಿದ ರೀತಿಯಲ್ಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಹೊಸ ಮುಖಗಳ ಪರಿಚಯವೇ ಬಿಜೆಪಿ ಅಧಿಕಾರಕ್ಕೇರಲು ಕಾರಣ: ಬಿ.ಎಲ್.ಸಂತೋಷ್
Advertisement
Advertisement
ಏಕರೂಪ ನಾಗರಿಕ ಸಂಹಿತೆಯ ಕರಡು ರಚನೆಗೆ ಸಮಿತಿಯನ್ನು ರಚಿಸಲಾಗುವುದು ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಹೇಳಿದ ಬಳಿಕ ಏಕರೂಪ ನಾಗರಿಕ ಸಂಹಿತೆಯ ಕುರಿತು ಚರ್ಚೆ ಮತ್ತೆ ಆರಂಭವಾಗಿದೆ. ಈ ಹಿಂದೆ ಏಕರೂಪ ನಾಗರಿಕ ಸಂಹಿತೆಯ ಅರ್ಹತೆಗಳನ್ನು ವಿವರಿಸಲು ಚೌಪಲ್‍ಗಳನ್ನು ಸ್ಥಾಪಿಸಲಾಗುವುದು ಎಂದು ಉತ್ತರ ಪ್ರದೇಶದ ಮುಸ್ಲಿಂ ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ ಹೇಳಿದ್ದರು. ಇದನ್ನೂ ಓದಿ: ಮೈ ಮೇಲೆ ಕೆಸರು ಹಾರಿಸಿದ್ದಕ್ಕೆ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ