ಡೆಹ್ರಾಡೂನ್: ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉತ್ತರಾಖಂಡ ಸರ್ಕಾರ (Uttarakhand Government) ಏಕರೂಪ ನಾಗರಿಕ ಸಂಹಿತೆ(UCC) ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದೆ.
ಇಂದು ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದರು. ಮಸೂದೆ ಮಂಡನೆಯ ವೇಳೆ ಬಿಜೆಪಿ ಸದಸ್ಯರು ರಾಮ್ ರಾಮ್ ಎಂದು ಮೇಜು ಕುಟ್ಟಿ ಸಂತಸ ವ್ಯಕ್ತಪಡಿಸಿದರು.
Advertisement
ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಅಂಶ ಈ ಮಸೂದೆಯಲ್ಲಿದೆ.
Advertisement
#WATCH | Uttarakhand CM Pushkar Singh Dhami leaves from his residence in Dehradun with a copy of the Indian Constitution
CM Dhami will present the Uniform Civil Code Uttarakhand 2024 Bill in the State Assembly today. pic.twitter.com/b7HEGGqG7g
— ANI (@ANI) February 6, 2024
Advertisement
ಏಕರೂಪದ ನಾಗರಿಕ ಸಂಹಿತೆ ರಚನೆ ಸಂಬಂಧ ಸರ್ಕಾರ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಈ ಸಮಿತಿ 4 ಸಂಪುಟ ಹೊಂದಿರುವ 749 ಪುಟಗಳಿರುವ ವರದಿ ಮತ್ತು ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿತ್ತು. ಇದನ್ನೂ ಓದಿ: ನಾಯಿ ತಿನ್ನದ ಬಿಸ್ಕತ್ತನ್ನು ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ – ವಿಡಿಯೋ ವೈರಲ್
Advertisement
ಸಮಿತಿ ಆನ್‌ಲೈನ್ ಮೂಲಕ 2.33 ಲಕ್ಷ ಪ್ರತಿಕ್ರಿಯೆ ಪಡೆದಿದ್ದರೆ 70ಕ್ಕೂ ಹೆಚ್ಚು ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿ ಜನರಿಂದ ಅಭಿಪ್ರಾಯ ಸಂಗ್ರಹಿಸಿತ್ತು.
#WATCH | Uttarakhand CM Pushkar Singh Dhami tables the Uniform Civil Code Uttarakhand 2024 Bill in State Assembly, in Dehradun. pic.twitter.com/B1LRzfoC09
— ANI (@ANI) February 6, 2024
ಬಹುಪತ್ನಿತ್ವ ಮತ್ತು ಬಾಲ್ಯವಿವಾಹದ ಮೇಲೆ ಸಂಪೂರ್ಣ ನಿಷೇಧ, ಎಲ್ಲಾ ಧರ್ಮದ ಹೆಣ್ಣು ಮಕ್ಕಳಿಗೆ ಪ್ರಮಾಣೀಕೃತ ಮದುವೆಯ ವಯಸ್ಸು ಮತ್ತು ವಿಚ್ಛೇದನಕ್ಕೆ ಏಕರೂಪದ ಪ್ರಕ್ರಿಯೆ ಸೇರಿದಂತೆ ಹಲವು ಪ್ರಸ್ತಾಪಗಳಿವೆ. ವಿಧಾನಸಭೆಯಲ್ಲಿ ಈ ಮಸೂದೆ ಅಂಗೀಕಾರಗೊಂಡು ರಾಜ್ಯಪಾಲರಿಂದ ಅಂಕಿತ ಬಿದ್ದರೆ ಯುಸಿಸಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.
ಗುಜರಾತ್ ಹಾಗೂ ಅಸ್ಸಾಂ ಸೇರಿದಂತೆ ದೇಶದ ಹಲವು ಬಿಜೆಪಿ ಆಡಳಿತದ ರಾಜ್ಯಗಳು ಉತ್ತರಾಖಂಡ ಯುಸಿಸಿಯನ್ನು ಮಾದರಿಯಾಗಿ ಅನುಸರಿಸಲು ಮುಂದಾಗಿವೆ.