ಯಾವುದೇ ಧರ್ಮದವರಿಗೂ 2ನೇ ಮದುವೆ ಅವಕಾಶವಿಲ್ಲ, ಲಿವ್ ಇನ್ ಸಂಬಂಧಕ್ಕೆ ನೋಂದಣಿ ಕಡ್ಡಾಯ – UCC ಮಸೂದೆಯಲ್ಲಿ ಏನಿದೆ?

Public TV
3 Min Read
Live In Relationship 3

– ಉತ್ತರಾಖಂಡದಲ್ಲಿ ಐತಿಹಾಸಿಕ ಏಕರೂಪದ ನಾಗರಿಕ ಸಂಹಿತೆ ಮಸೂದೆ ಮಂಡನೆ

ಡೆಹ್ರಾಡೂನ್‌: ಉತ್ತರಾಖಂಡ (Uttarakhand) ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆ ಮಂಡನೆ ಆಗಿದೆ. ಲಿವ್ ಇನ್ ಸಂಬಂಧಕ್ಕೆ (Live in Relationship) ನೋಂದಣಿ ಕಡ್ಡಾಯ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ. ಇದು ಉತ್ತರಾಖಂಡ ಸರ್ಕಾರ ಮಂಡಿಸಿದ ಐತಿಹಾಸಿಕ ಐತಿಹಾಸಿಕ ಏಕರೂಪ ನಾಗರಿಕ ಸಂಹಿತೆ ಮಸೂದೆಯಲ್ಲಿರುವ ಪ್ರಮುಖ ಅಂಶಗಳು.

ಮಸೂದೆಯಲ್ಲಿ ಏನಿದೆ?
ರಾಜ್ಯದ ಮುಸ್ಲಿಮರು (Muslims) ಸೇರಿದಂತೆ ಎಲ್ಲಾ ಧರ್ಮದವರು ಎರಡನೇ ವಿವಾಹವಾಗುವುದು ಅಪರಾಧ. ಒಂದು ಮದುವೆಗೆ ಮಾತ್ರ ಕಾನೂನಿನ ಮಾನ್ಯತೆ ಇರಲಿದೆ.  ಹಾಲಿ ಷರಿಯಾ ಕಾನೂನಿನಡಿ ಮುಸ್ಲಿಮರು ಕಾನೂನು ಬದ್ಧವಾಗಿಯೇ 3 ವಿವಾಹವಾಗುವ ಅವಕಾಶವಿದೆ. ವಿವಾಹ, ವಿಚ್ಛೇದನ, ಆಸ್ತಿ, ಉತ್ತರದಾಯಿತ್ವ ಎಲ್ಲಾ ವಿಚಾರದಲ್ಲಿ ಎಲ್ಲಾ ಧರ್ಮದ ಜನರಿಗೆ ಒಂದೇ ನಿಯಮ ಅನ್ವಯವಾಗುತ್ತದೆ. ಇದನ್ನೂ ಓದಿ: ಆಸ್ಟ್ರೇಲಿಯಾ ಸೆನೆಟರ್‌ ಆಗಿ ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ವರುಣ್‌

Pushkar Singh Dhami

ಲಿವ್ ಇನ್ ಸಂಬಂಕ್ಕೆ ನೋಂದಣಿ ಕಡ್ಡಾಯ ಮಾಡಲಾಗಿದೆ. ನೋಂದಣಿ 1 ತಿಂಗಳು ತಡವಾದರೆ 3 ತಿಂಗಳು ಜೈಲು, 25ಸಾವಿರ ದಂಡ ವಿಧಿಸಲಾಗುತ್ತದೆ. ನೋಂದಣಿ ಸಂಶಯಾಸ್ಪದ ಆಗಿದ್ದರೆ ತನಿಖೆ ನಡೆಸಲಾಗುತ್ತದೆ. ಲಿವ್ ಇನ್ ಸಂಬಂಧದಿಂದ ಜನಿಸಿದ ಮಕ್ಕಳಿಗೆ ಕಾನೂನು ಮಾನ್ಯತೆ ಸೇರಿದಂತೆ ಆಸ್ತಿಯಲ್ಲೂ ಸಮಪಾಲು ಸಿಗಲಿದೆ. ಲಿವ್ ಇನ್ ಸಂಗಾತಿ ತೊರೆದಲ್ಲಿ ಜೀವನಾಂಶ ಪಡೆಯಬಹುದು. ಸಂಬಂಧ ಮುಂದುವರಿಸಲು ಇಷ್ಟವಿಲ್ಲದ ಜೋಡಿ, ದಾಖಲೆಗಳನ್ನು ಸಲ್ಲಿಸಿ ಲಿಖಿತ ಹೇಳಿಕೆ ನೀಡಿ ಲಿವ್‌ ಇನ್‌ ಸಂಬಂಧ ಕಡಿತಗೊಳಿಸಬಹುದು.

ಈ ಮಸೂದೆಯಿಂದ ಬುಡಕಟ್ಟು ಸಮುದಾಯವನ್ನು ಹೊರಗಿಡಲಾಗಿದೆ.  ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋಟ್‌ ಮೊಮ್ಮಗನ ವಿವಾಹ ಆರತಕ್ಷತೆ – ಸಿಎಂ, ಡಿಸಿಎಂ ಭಾಗಿ

ಅತ್ಯಾಚಾರ ಅಥವಾ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಪತಿಗೆ ವಿಚ್ಛೇದನ ನೀಡುವ ಹಕ್ಕನ್ನು ಮಸೂದೆ ಮಹಿಳೆಯರಿಗೆ ನೀಡುತ್ತದೆ. ಮದುವೆಯಾದ ಒಂದೇ ವರ್ಷದೊಳಗೆ ವಿವಾಹ ವಿಚ್ಛೇದನ ಪಡೆಯುವುದನ್ನು ಅಸಾಧಾರಣ ಸಂದರ್ಭ ಹೊರತುಪಡಿಸಿ ಉಳಿದ ಸನ್ನಿವೇಶಗಳಲ್ಲಿ ನಿರ್ಬಂಧಿಸುವ ಅಂಶವಿದೆ. ಅತ್ಯಾಚಾರ ಪ್ರಕರಣದಲ್ಲಿ ಪತಿ ಪತಿ ಸಿಲುಕಿದರೆ ಆತನಿಂದ ಪತ್ನಿ ವಿಚ್ಛೇದನ ಕೇಳಬಹುದು.

ವಿವಾಹವಾದ 60 ದಿನದ ಒಳಗಡೆ ನೋಂದಣಿ ಮಾಡಿಸಬೇಕು. 2010ರ ಮಾ.26ರ ನಂತರ ಮದುವೆಯಾದವರು 6 ತಿಂಗಳೊಳಗೆ ನೋಂದಣಿ ಮಾಡಿಸುವುದು ಕಡ್ಡಾಯ. ನಿರ್ಲಕ್ಷಿಸಿದರೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ. ಆದರೆ ನೋಂದಣಿಯಾಗದ ವಿವಾಹವನ್ನು ಅಸಿಂಧು ಎಂದು ಪರಿಗಣನೆ ಮಾಡುವುದಿಲ್ಲ.

 

ವಿರೋದಿಸಲ್ಲ ಎಂದ ಕಾಂಗ್ರೆಸ್‌:
ಸಂವಿಧಾನದ ಮೂಲ ಪ್ರತಿಯೊಂದಿಗೆ ವಿಧಾನಸಭೆ ಪ್ರವೇಶಿಸಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡಿಸಿದ್ದಾರೆ. ಈ ವೇಳೆ ಬಿಜೆಪಿ ಶಾಸಕರು ವಂದೇಮಾತರಂ, ಜೈ ಶ್ರೀರಾಮ್ ಎಂಬ ಘೋಷಣೆ ಕೂಗಿದರು.

ವಿಶೇಷ ಏನೆಂದರೆ ನಾವು ಏಕರೂಪ ನಾಗರಿಕಾ ಸಂಹಿತೆ ವಿಧೇಯಕವನ್ನು ನಾವು ವಿರೋಧಿಸುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು (Congress Leaders) ಹೇಳಿಕೊಂಡಿದ್ದಾರೆ. ವಿಸ್ತೃತ ಚರ್ಚೆ ನಂತರ ಈ ವಿಧೇಯಕವನ್ನು ಮತಕ್ಕೆ ಹಾಕಲಾಗುತ್ತದೆ. ಇದಕ್ಕೆ ಅನುಮೋದನೆ ಸಿಕ್ಕರೆ ಸ್ವಾತಂತ್ರ್ಯದ ನಂತರ ದೇಶದಲ್ಲೇ ಮೊದಲ ಬಾರಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದ ಗರಿಮೆಗೆ ಉತ್ತರಾಖಂಡ್ ಪಾತ್ರವಾಗಲಿದೆ.

ಪೋರ್ಚುಗೀಸರ ಕಾಲದಿಂದಲೂ ಗೋವಾದಲ್ಲಿ ಏಕರೂಪ ನಾಗರಿಕಾ ಸಂಹಿತೆ ಜಾರಿಯಲ್ಲಿದೆ. ಮತ್ತೊಂದೆಡೆ ರಾಜಸ್ಥಾನದಲ್ಲೂ ಯುಸಿಸಿ ಜಾರಿಗೆ ಬಿಜೆಪಿ ಸರ್ಕಾರ ಮುಂದಾಗಿದೆ. ಈಗಾಗಲೇ ಚರ್ಚೆಗಳು ನಡೆಯುತ್ತಿದ್ದು, ಮುಂದಿನ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆಗಳಿವೆ.

ಏಕರೂಪದ ನಾಗರಿಕ ಸಂಹಿತೆ ರಚನೆ ಸಂಬಂಧ ಉತ್ತರಾಖಂಡ ಸರ್ಕಾರ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್‌ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಈ ಸಮಿತಿ 4 ಸಂಪುಟ ಹೊಂದಿರುವ 749 ಪುಟಗಳಿರುವ ವರದಿ ಮತ್ತು ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿತ್ತು.

Share This Article