ಬೆಂಗಳೂರು: ರಾಜ್ಯದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಟ್ಯಾಕ್ಸಿ (Taxi), ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್ಸ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಮಾದರಿಯ ಟ್ಯಾಕ್ಸಿಗಳ ಪ್ರಯಾಣ ದರ ಮತ್ತು ಸಾಗಾಣಿಕ ದರಗಳನ್ನು ಏಕರೂಪಗೊಳಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
ಸಿಟಿ ಟ್ಯಾಕ್ಸಿ (City Taxi) ಸೇವೆಯಲ್ಲಿ ಹಗಲು ದರೋಡೆ ನಡೆಯುತ್ತಿದೆ, ಮನಸೋ ಇಚ್ಚೆ ದರ ವಿಧಿಲಾಗುತ್ತಿದೆ ಅನ್ನೋ ಬಗ್ಗೆ ವ್ಯಾಪಕ ದೂರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಟ್ಯಾಕ್ಸಿಗಳ ಆಟಟೋಪಕ್ಕೆ ಬ್ರೇಕ್ ಹಾಕಲು ಇಲಾಖೆ ಸಾರಿಗೆ ಇಲಾಖೆ (Transport Department) ಮುಂದಾಗಿದೆ. ಇದನ್ನೂ ಓದಿ: ಸಾಮೂಹಿಕ ವಿವಾಹದಲ್ಲಿ ಗೋಲ್ಮಾಲ್ – ಹಣಕ್ಕೆ ದಂಪತಿಯಾದ ಜೋಡಿಗಳು, 15 ಮಂದಿ ಸೇರಿ ಇಬ್ಬರು ಅಧಿಕಾರಿಗಳ ಬಂಧನ
Advertisement
Advertisement
2021ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಪ್ರಾಧಿಕಾರ ವಾಹನಗಳ ಮೌಲ್ಯ ಆಧರಿಸಿ ದರ ನಿಗದಿ ಮಾಡಿತ್ತು. ಸಿಟಿ ಟ್ಯಾಕ್ಸಿ ಸೇವೆಯನ್ನು ಎಬಿಸಿಡಿ ಎಂದು ವರ್ಗೀಕರಿಸಿ 2021ರ ಏಪ್ರಿಲ್ 1ರಿಂದ ಅನ್ವಯವಾಗುವಂತೆ ದರ ನಿಗದಿ ಮಾಡಿತ್ತು. ಆದ್ರೆ ಫೆಬ್ರವರಿಯಿಂದಲೇ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನೂ ಓದಿ: 1 ಕಿ.ಮಿಗೆ 1.59 ಲಕ್ಷ, ದಿನಕ್ಕೆ 50 ಲಕ್ಷ – ಭಾರತ್ ಜೋಡೋ ಯಾತ್ರೆಗೆ ಬರೋಬ್ಬರಿ 71 ಕೋಟಿ ಖರ್ಚು
Advertisement
ಸಾರಿಗೆ ಸಚಿವರ ಸೂಚನೆ ಮೇರೆಗೆ ಏಕರೂಪ ಪ್ರಯಾಣ ದರ ನಿಗದಿಪಡಿಸಿ ಸರ್ಕಾರ ಆದೇಶ
* 10 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 100 ರೂ. ನಿಗದಿ
* 4 ಕಿಮೀ ನಂತರ ಪ್ರತಿ ಕಿಮೀಗೆ ಹೆಚ್ಚುವರಿ 24 ರೂ.ನಿಗದಿ
* 10 ಲಕ್ಷದಿಂದ 15 ಲಕ್ಷ ರೂ.ವರೆಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 115 ರೂ. ನಿಗದಿ
* 4 ಕಿಮೀ ನಂತರ ಪ್ರತಿ 1 ಕಿಮೀಗೆ ಹೆಚ್ಚುವರಿ 28 ರೂ. ನಿಗದಿ
* 15 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 130 ರೂ. ನಿಗದಿ
* 4 ಕಿಮೀ ನಂತರ ಪ್ರತಿ ಕಿಲೋ ಮೀಟರ್‌ಗೆ ಹೆಚ್ಚುವರಿ 32 ರೂ. ನಿಗದಿ
Advertisement
ಹೊಸ ನಿಯಮಗಳೇನು?
* ವೈಯಕ್ತಿಕ ಲಗೇಜುಗಳಿಗೆ 120 ಕೆಜಿ ವರೆಗೆ ವಿನಾಯಿತಿ
* ಮೊದಲ 5 ನಿಮಿಷ ಕಾಯುವಿಕೆಗೆ ಶುಲ್ಕ ಇಲ್ಲ
* ಪ್ರಯಾಣಿಕರಿಂದ ಜಿಎಸ್‌ಟಿ, ಟೋಲ್ ವಸೂಲಿಗೆ ಅವಕಾಶ
* ಬೆಳಗ್ಗಿನ ಜಾವ 6 ಗಂಟೆ ವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ 10% ಹೆಚ್ಚುವರಿ ದರ ವಿಧಿಸಲು ಅವಕಾಶ