ಬೆಂಗಳೂರು: ಹಿಜಬ್ ವಿವಾದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದನ್ನೂ ಓದಿ: ಇನ್‍ಸ್ಟಾದಲ್ಲಿ ಆರಂಭ ಬೀದಿಯಲ್ಲಿ ಮಾರಾಮಾರಿ – ರಸ್ತೆಯಲ್ಲೇ ವಿದ್ಯಾರ್ಥಿನಿಯರ ಗ್ಯಾಂಗ್‍ವಾರ್
Advertisement
Advertisement
ಮಾರ್ಗಸೂಚಿಯಲ್ಲಿ ಏನಿದೆ?
ಕಾಲೇಜು ಅಭಿವೃದ್ಧಿ ಸಮಿತಿ ನಿಗದಿ ಮಾಡಿರುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕು. ಒಂದು ವೇಳೆ ಸಮವಸ್ತ್ರ ನಿಯಮ ಇಲ್ಲದೆ ಇದ್ದರೆ ಧಾರ್ಮಿಕ ಭಾವನೆಗೆ ಧಕ್ಕೆ ಆಗದಂತಹ ವಸ್ತ್ರ ಧರಿಸಬೇಕು ಎಂದು ಹೇಳಿದೆ. ಹೈಕೋರ್ಟ್ ತೀರ್ಪಿನ ಅನ್ವಯ ಸಮವಸ್ತ್ರ ಧರಿಸುವಂತೆ ಸೂಚಿಸಿದೆ.
Advertisement
Advertisement
ಹಿಜಬ್ ವಿವಾದದ ಹಿನ್ನೆಲೆಯಲ್ಲಿ ಈ ವರ್ಷ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಶಿಕ್ಷಣ ಇಲಾಖೆ ಉಲ್ಲೇಖ ಮಾಡಿದೆ. ಕಳೆದ ವರ್ಷದ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಉಲ್ಲೇಖ ಮಾಡಿರಲಿಲ್ಲ. ಈ ವರ್ಷ ಹೈಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಮಾರ್ಗಸೂಚಿಯಲ್ಲಿ ಸಮವಸ್ತ್ರ ಕಡ್ಡಾಯದ ಬಗ್ಗೆ ಪಿಯುಸಿ ಬೋರ್ಡ್ ಉಲ್ಲೇಖ ಮಾಡಿದೆ.