– ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಿದ ಕೇಂದ್ರ ಸಚಿವೆ
ಮೈಸೂರು: ಪ್ರಧಾನಿ ಮೋದಿ ದೇಶದ ರೈತನ ಮಗಳನ್ನು ಗುರುತಿಸಿ ಕೃಷಿ ಖಾತೆ ನೀಡಿದ್ದಾರೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Advertisement
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ, ಚಾಮುಂಡಿ ತಾಯಿ ದರ್ಶನ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹಳ್ಳಿಯಲ್ಲಿ ನಾನು ಓದುವಾಗ ವಿದ್ಯುತ್, ರಸ್ತೆ ಇರಲಿಲ್ಲ. ಅಂತಹ ಹಳ್ಳಿಯಿಂದ ಬಂದವಳಿಗೆ ಕೃಷಿ ಖಾತೆ ಕೊಟ್ಟು ಕೆಲಸ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ದೇಶದ ಶೇಕಡ 80ರಷ್ಟು ರೈತರ ಹಿತ ಕಾಯಬೇಕಿದೆ. ರೈತರು ಬೇರೆ ಕೆಲಸಗಳಿಗೆ ಹೋಗದೆ ಕೃಷಿಯಲ್ಲೇ ಉಳಿಯುವಂತೆ ಮಾಡಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯಿಂದ ಕಾರ್ಯಯೋಜನೆ ರೂಪಿಸುತ್ತೇನೆ ಎಂದು ತಿಳಿಸಿದರು.
Advertisement
Advertisement
ನಾನು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದ ಮೆಟ್ಟಿಲುಗಳನ್ನು ಹತ್ತುತ್ತಿದ್ದೆ. ಈ ವರ್ಷ ಸಚಿವರೆಲ್ಲ ದೆಹಲಿಯಲ್ಲೇ ಇರಬೇಕು ಎಂಬ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಷಾಢಕ್ಕೆ ಬರಲು ಸಾಧ್ಯ ಆಗಿರಲಿಲ್ಲ. ಮುಂದೆ ನವರಾತ್ರಿಗೆ ಬಂದು ಮೆಟ್ಟಿಲು ಹತ್ತುತ್ತೇನೆ. ತಾಯಿ ಚಾಮುಂಡೇಶ್ವರಿ ನನಗೆ ಎಲ್ಲ ಬಗೆಯ ಶಕ್ತಿ ತುಂಬಿದ್ದಾಳೆ. ನಾನು ಮೊದಲು ಮೈಸೂರಿಗೆ ಬಂದಾಗ ದಸರಾ ಆಚರಣೆ ಮಾಡೋದು ಗೊತ್ತಿಲ್ಲ ಎಲ್ಲರೂ ಗೇಲಿ ಮಾಡಿದ್ದರು. ಆದರೆ ತಾಯಿ ಕೃಪೆಯಿಂದ ಅದನ್ನು ಮಾಡಿ ತೋರಿಸಿದ್ದೇನೆ ಎಂದರು.