ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ 2ರ ಮೊದಲ ಬಜೆಟನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ್ದಾರೆ. ಬಜೆಟ್ ಭಾಷಣದ ಸಂದರ್ಭದಲ್ಲಿ ವಿತ್ತ ಸಚಿವೆ ಅಬಕಾರಿ ಸುಂಕ ಏರಿಸಿದ್ದರಿಂದ ಕೆಲ ವಸ್ತುಗಳ ಬೆಲೆ ಏರಿಕೆಯಾಗಲಿದೆ.
ಯಾವುದಕ್ಕೆಲ್ಲ ಏರಿಕೆ?
* ಪೆಟ್ರೋಲ್, ಡೀಸೆಲ್, ಚಿನ್ನ ದರ ಏರಿಕೆಯಾಗಲಿದೆ
* ಗೃಹ ಉಪಯೋಗಿ ವಸ್ತುಗಳ ಮೇಲಿನ ಜಿಎಸ್‍ಟಿ ದುಪ್ಪಟ್ಟಾಗಿದೆ.
* ಸಿಗರೇಟ್ ಸೇರಿದಂತೆ ತಂಬಾಕು ಉತ್ಪನ್ನಗಳ ಮೇಲೆನ ತೆರಿಗೆ ಏರಿಕೆ ಮಾಡಲಾಗಿದೆ.
* ಚೀನಾ ಸೆರಾಮಿಕ್, ಜೇಡಿ ಮಣ್ಣಿನಿಂದ ತಯಾರಿಸಿದ ಗೃಹ ಉಪಯೋಗಿ ವಸ್ತುಗಳ ಮೇಲಿನ ತೆರಿಗೆ ಏರಿಕೆಯಾಗಿದೆ.
* ಗೃಹ ಉಪಯೋಗಿ ವಸ್ತುಗಳ ಮೇಲಿನ ಜಿಎಸ್‍ಟಿ ಶೇ.10ರಿಂದ ಶೆ. 20ರಷ್ಟು ಏರಿಕೆಯಾಗಿದೆ.
* ಪಿಂಗಾಣಿ ಕಪ್, ಮಗ್, ತಾಮ್ರ, ಸ್ಟೀಲ್ ಪಾತ್ರೆಗಳ ಮೇಲಿನ ತೆರಿಗೆ ಏರಿಕೆಯಾಗಿದೆ.
Advertisement
Advertisement
* ವಾಣಿಜ್ಯ ವಾಹನಗಳ ಬಿಡಿ ಭಾಗಗಳ ಮೇಲಿನ ತೆರಿಗೆ ಹಾಗೂ ವಾಣಿಜ್ಯ ವಾಹನಗಳ ಮೇಲಿನ ತೆರಿಗೆಯಲ್ಲಿ ಏರಿಕೆ.
* ಆಟೋ, ಬೈಕ್, ಕಾರು ದುಬಾರಿ
* ಚಪ್ಪಲಿ, ಫರ್ನಿಚರ್ ದುಬಾರಿ
* ಪೀಠೋಪಕರಣಗಳು ಹಾಗೂ ಗೃಹೋಪಯೋಗಿ ವಸ್ತುಗಳ ದರ ಏರಿಕೆಯಾಗಿದೆ
* ಕೆನೆ ತೆಗೆದ ಹಾಲಿನ ಉತ್ಪನ್ನಗಳು ಇನ್ಮುಂದೆ ಮತ್ತಷ್ಟು ತುಟ್ಟಿಯಾಗಲಿವೆ
* ಸಕ್ಕರೆ ಬೆಲೆ ಏರಿಕೆಯಾಗಿದೆ
* ಸೋಯಾ ಫೈಬರ್ ಉತ್ಪನ್ನಗಳ ದರ ಏರಿಕೆಯಾಗಿದೆ
* ವೈದ್ಯಕೀಯ ಸಲಕರಣೆಗಳ ಮೇಲಿನ ತೆರಿಗೆ ಏರಿಕೆ ಆಗಿರೋದ್ರಿಂದ ಆಸ್ಪತ್ರೆ ಖರ್ಚು ಹೆಚ್ಚಲಿದೆ. ಇದನ್ನೂ ಓದಿ: ಆದಾಯ ತೆರಿಗೆಯಲ್ಲಿ ಭಾರೀ ಕಡಿತ
Advertisement
Advertisement
ಇಳಿಕೆ ಕಂಡಿದ್ದು ಯಾವುದು?:
* ನ್ಯೂಸ್ ಪ್ರಿಂಟ್‍ಗಳ ದರ ಇಳಿಕೆ
* ಹಗುರ ಕೋಟೆಡ್ ಕಾಗಗದ ದರ ಇಳಿಕೆ