ನವದೆಹಲಿ: ಕೇಂದ್ರ ಸರ್ಕಾರ ಡಿಜಿಟಲ್ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಇದೊಂದು ದೊಡ್ಡ ನಿರ್ಧಾರವಾಗಿದ್ದು ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರಿಯ ಗುಣಮಟ್ಟದ ಶಿಕ್ಷಣ ನೀಡಲು ಈ ಯೋಜನೆ ತರಲಾಗಿದೆ. ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಈ ಯೋಜನೆಯಲ್ಲಿ ಕೈಜೋಡಿಸಲಿದೆ ಎಂದು ಅವರು ಮಾಹಿತಿ ನೀಡಿದರು.
Advertisement
ಒಂದನೇ ತರಗತಿಯಿಂದ 12ನೇ ತರಗತಿಯವರೆಗೆ ಪಠ್ಯ ಬೋಧಿಸಲು 200 ಪ್ರಾದೇಶಿಕ ಟಿವಿ ಚಾನೆಲ್ಗಳನ್ನು ತೆರೆಯಲಾಗುತ್ತದೆ.