ನವದೆಹಲಿ: ಕೇಂದ್ರ ಸರ್ಕಾರದ 2022-23ರ ಬಜೆಟ್‍ನ್ನು ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್‍ಗೆ ಉದ್ಯಮಿ, ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಮೆಚ್ಚುಗೆ ಸೂಚಿಸಿ, ಪ್ರಶಂಸಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್‍ನಲ್ಲಿ ಏನಿದೆ?: ಸಂಕ್ಷಿಪ್ತತೆಯು ಯಾವಾಗಲೂ ಸದ್ಗುಣವಾಗಿದೆ. ನಿರ್ಮಲಾ ಸೀತಾರಾಮನ್ ಅವರ ಚಿಕ್ಕ ಬಜೆಟ್ ಅತ್ಯಂತ ಪ್ರಭಾವಶಾಲಿಯಾಗಿದೆ ಎಂದು ಸಾಬೀತುಪಡಿಸಬಹುದಾಗಿದೆ ಎಂದು ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‍ಗೆ ಸಾವಿರಾರು ಮಂದಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
Advertisement
Brevity has always been a virtue. @nsitharaman ‘s shortest budget address may prove to be the most impactful…
— anand mahindra (@anandmahindra) February 1, 2022
Advertisement
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ. ಪ್ರಧಾನಿ ಗತಿಶಕ್ತಿ ಯೋಜನೆ, ಎಲ್ಲರನ್ನು ಒಳಗೊಳ್ಳುವ ಅಭಿವೃದ್ಧಿ, ಅಭಿವೃದ್ಧಿ ಆಧಾರಿತ ಹೂಡಿಕೆ, ಉದ್ಯಮಕ್ಕೆ ಆರ್ಥಿಕ ಉತ್ತೇಜನ ಹೀಗೆ ನಾಲ್ಕು ಸೂತ್ರಗಳನ್ನು ಬಜೆಟ್ ಒಳಗೊಂಡಿತ್ತು. 400 ಹೊಸ ತಲೆಮಾರಿನ ವಂಧೆ ಭಾರತ್ ರೈಲು, 2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೆರಿಸುವ ಯೋಜನೆ, ಗ್ರಾಮೀಣ ಮಕ್ಕಳಿಗೆ ವನ್ ಕ್ಲಾಸ್ ವನ್ ಟಿವಿ, ಕೆನ್ ಬೆಟ್ಟಾ ನದಿ ಜೋಡಣೆ ಯೋಜನೆ, ಪಿಎಂ ಆವಾಸ್ ಯೋಜನೆಯಡಿ 80 ಲಕ್ಷ ಮನೆ ನಿರ್ಮಾಣ, ಜಿಎಸ್‍ಟಿ ಸಂಗ್ರಹ, 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆ ಹೀಗೆ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್ ಒಳಗೊಂಡಿತ್ತು.
Advertisement
Advertisement
ಕೊರೊನಾ ಸಂದರ್ಭದಲ್ಲಿ ಮತ್ತೊಂದು ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಬಜೆಟ್ ನಾಲ್ಕು ಸೂತ್ರಗಳನ್ನು ಆಧರಿಸಿದೆ. ಏಳು ವಲಯಗಳನ್ನು ದೃಷ್ಟಿಯಲ್ಲಿ ಇರಿಸಿಕೊಂಡು ಬಜೆಟ್ ರೂಪಿಸಲಾಗಿದೆ ಎಂಬುದನ್ನು ಆರಂಭದಲ್ಲಿಯೇ ಹೇಳಿದ್ರು. ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಆರಂಭಿಸಿದ ನಿರ್ಮಲಾ ಸೀತಾರಾಮನ್ 12.30ಕ್ಕೆ ಅಂದ್ರೆ 90 ನಿಮಿಷಗಳಲ್ಲಿ ಬಜೆಟ್ ಭಾಷಣ ಮುಗಿಸಿದ್ದಾರೆ.