ನವದೆಹಲಿ: ವಿದ್ಯಾರ್ಥಿಗಳಿಗೆ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಿಸಿದರು.
ತಮ್ಮ ಬಜೆಟ್ ಭಾಷಣದಲ್ಲಿ, ಮಕ್ಕಳಿಗಾಗಿ (Children) ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ (National Digital Library) ಸ್ಥಾಪಿಸಲಾಗುವುದು. ಈ ಡಿಜಿಟಲ್ ಗ್ರಂಥಾಲಯದಲ್ಲಿ ಭೌಗೋಳಿಕತೆ, ಭಾಷೆ ಸೇರಿದಂತೆ ಎಲ್ಲ ಪ್ರಕಾರದ ಹಾಗೂ ಎಲ್ಲ ಹಂತಗಳಲ್ಲಿ ಗುಣಮಟ್ಟದ ಪುಸ್ತಕಗಳು ಲಭ್ಯತೆ ಇರುತ್ತದೆ ಎಂದು ತಿಳಿಸಿದರು.
Advertisement
Advertisement
ಪ್ರತಿ ರಾಜ್ಯಗಳ ಪಂಚಾಯತ್ ಹಾಗೂ ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಹಾಗೂ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸಂಪನ್ಮೂಲಗಳಿಗೆ ಮೂಲಸೌಕರ್ಯವನ್ನು ಒದಗಿಸಲು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಿದೆ: ಹೆಚ್‍ಡಿಕೆ
Advertisement
2023-24ರ ಬಜೆಟ್ ನಿರ್ಮಲಾ ಸೀತಾರಾಮನ್ ಅವರ ಐದನೇ ನೇರ ಬಜೆಟ್ ಆಗಿದೆ. 2024ರ ಲೋಕಸಭಾ ಚುನಾವಣೆಯ ಮುನ್ನ ನಡೆದ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಇದಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಗಿಫ್ಟ್ : ಭದ್ರಾ ಮೇಲ್ದಂಡೆ ಇನ್ನು ಮುಂದೆ ರಾಷ್ಟ್ರೀಯ ಯೋಜನೆ – 5,300 ಕೋಟಿ ರೂ. ಅನುದಾನ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k