ಧಾರವಾಡ: ಕೇಂದ್ರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಬುಧವಾರ) ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಧಾರವಾಡದ ಕಸೂತಿ ಕಲೆಯಿರುವ ಸೀರೆಯನ್ನುಟ್ಟು (Budget) ಅವರು ಬಜೆಟ್ (Union Budget 2023) ಮಂಡನೆ ಮಾಡಿದ್ದು ವಿಶೇಷವಾಗಿತ್ತು.
ಧಾರವಾಡ (Dharwad) ಜಿಲ್ಲೆಯ ನವಲಗುಂದ ಕಸೂತಿ ಕಲೆ ಇರುವ ಕೆಂಪು ಬಣ್ಣದ ಸೀರೆಯುಟ್ಟು ಬಂದ ನಿರ್ಮಲಾ ಸೀತಾರಾಮನ್ ದೇಶದ ಗಮನ ಸೆಳೆದಿದ್ದಾರೆ. ಈ ಸೀರೆಗೆ ಕಸೂತಿ ಹಾಕಿ ವಿಶೇಷವಾಗಿ ರೂಪಿಸಿದ್ದು. ಧಾರವಾಡ ನಗರದ ನಾರಾಯಣಪುರದಲ್ಲಿರುವ ಆರತಿ ಹಿರೇಮಠ ಮಾಲೀಕತ್ವದ ಆರತಿ ಕ್ರಾಪ್ಟ್‌ನ ಮಹಿಳಾಮಣಿಗಳು ಎನ್ನುವುದು ಇನ್ನೂ ವಿಶೇಷವಾಗಿದೆ. ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿ ಸೈಯದ್ ನಯೀಮ್ ಅಹ್ಮದ್ ಮೂಲಕ ಕಸೂತಿ ಪರಿಣಿತರನ್ನು ಗುರುತಿಸಿ, ಕಸೂತಿ ಸೀರೆ ತಯಾರಿಗೆ ಸೂಚಿಸಿದ್ದರು.
Advertisement
Advertisement
ಆರತಿ ಕ್ರಾಪ್ಟ್ ಮಾಲೀಕರಾದ ಆರತಿ ಹಿರೇಮಠ ಅವರು ಸಂತಸದಿಂದ ಕಸೂತಿ ಕಾರ್ಯ ಆರಂಭಿಸಿದ್ದರು. ಕಳೆದ 32 ವರ್ಷಗಳಿಂದ ಕಸೂತಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಆರತಿ ಅವರು, ಸುಮಾರು 210 ಮಹಿಳೆಯರ ತಂಡ ಕಟ್ಟಿ, ಅವರಿಗೆ ಅಗತ್ಯವಿರುವ ಕಸೂತಿ ತರಬೇತಿ ನೀಡಿ, ಸ್ವಯಂ ಉದ್ಯೋಗ ನೀಡಿದ್ದಾರೆ. ಇದನ್ನೂ ಓದಿ: ಎಲ್ಲವನ್ನೂ ಕೊಟ್ಟಿರುವ ಬಿಜೆಪಿ ಬಿಡುವ ಮಾತೇ ಇಲ್ಲ – ಸಚಿವ ನಾರಾಯಣಗೌಡ ಸ್ಪಷ್ಟನೆ
Advertisement
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬೇಡಿಕೆಯಂತೆ ಸೀರೆಗಳನ್ನು ಕಳುಹಿಸಲಾಗಿದ್ದು, ಅದರಲ್ಲಿ ಇಂದು (ಬುಧವಾರ) ಅವರು ತೊಟ್ಟಿರುವ ಕೆಂಪು ಬಣ್ಣದ ಸೀರೆಯೂ ಸೇರಿದೆ. ಕೈಮಗ್ಗದಲ್ಲಿ ನೇಯ್ದ ಇಳಕಲ್ ರೇಷ್ಮೆ ಸೀರೆಗಳಿಗೆ ಸಾಂಪ್ರದಾಯಿಕ ಧಾರವಾಡ ಕಸೂತಿ ಹಾಕಲಾಗಿದೆ. ಐದೂವರೆ ಮೀ. ಉದ್ದದ ಇಳಕಲ್ ಸೀರೆಗೆ ಚಿಕ್ಕಪರಾಸ್ ದಡಿಯಿದ್ದು, ತೇರು, ಗೋಪುರ, ನವಿಲು, ಕಮಲದ ಚಿತ್ರಗಳ ಕಸೂತಿ ಹಾಕಲಾಗಿದೆ.
Advertisement
ಇತ್ತೀಚೆಗೆ ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ನಡೆದ ಯುವಜನೋತ್ಸವದ ಉದ್ಘಾಟನೆಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಇದೇ ಕಸೂತಿ ಕೇಂದ್ರದಿಂದ ರೇಷ್ಮೆ ಶಲ್ಯ ಹೊದಿಸಲಾಗಿತ್ತು.
ಈ ಬಗ್ಗೆ ಮಾತನಾಡಿದ ಆರತಿ ಹಿರೇಮಠ ಅವರು, ತಾವೂ ಕಸೂತಿ ಸೀರೆಯುಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಎಂದಿದ್ದಾರೆ. ಈ ಸೀರೆಯ ಬೆಲೆ 26 ಸಾವಿರ ರೂ. ಇದ್ದು, ಇದನ್ನು ಕಸೂತಿ ಮಾಡಲು ಒಂದು ತಿಂಗಳು ಬೇಕು. ಆದರೆ ನಿರ್ಮಲಾ ಸೀತಾರಾಮನ್ ಅವರು ಇದನ್ನು ಆರ್ಡರ್ ಮಾಡಿದ್ದಕ್ಕೆ 10 ದಿನಗಳಲ್ಲಿ ತಯಾರಿ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಈ ಬಜೆಟ್ ಬಡವರು, ರೈತರು, ಮಧ್ಯಮ ವರ್ಗದ ಕನಸು ಮಾಡಲಿದೆ: ಮೋದಿ ಮೆಚ್ಚುಗೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k