ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ ಬಜೆಟ್‍ನಲ್ಲಿ (Union Budget 2023) ಕ್ರೀಡಾ ಕ್ಷೇತ್ರಕ್ಕೆ (Sports) ದಾಖಲೆಯ 3,397.32 ಕೋಟಿ ರೂ. ಮೀಸಲಿಡಲಾಗಿದೆ.
Advertisement
ಈವರೆಗಿನ ಬಜೆಟ್‍ನಲ್ಲಿ ಇಷ್ಟು ದೊಡ್ಡ ಮೊತ್ತದ ಅನುದಾನ ಕ್ರೀಡಾಗೆ ನೀಡಿರಲಿಲ್ಲ. ಈ ಬಾರಿ ದಾಖಲೆಯ ಮೊತ್ತದ ಅನುದಾನ ನೀಡಲಾಗಿದೆ. 2023ರ ಏಷ್ಯನ್ ಗೇಮ್ಸ್ (Asian Games), ಪ್ಯಾರಿಸ್ ಒಲಿಂಪಿಕ್ಸ್ (Paris Olympics) ಸಿದ್ಧತೆಗಾಗಿ ಹೆಚ್ಚಿನ ಹಣ ಮೀಸಲಿಡಲಾಗಿದೆ. ಖೇಲೋ ಇಂಡಿಯಾಗಾಗಿ (Khelo India) 1,045 ಕೋಟಿ ರೂ. ಅನುದಾನ ನೀಡಲಾಗಿದೆ. ಇದನ್ನೂ ಓದಿ: Union Budget 2023: ಚಿನ್ನ, ಬೆಳ್ಳಿ ಮತ್ತಷ್ಟು ದುಬಾರಿ – ಯಾವುದು ಇಳಿಕೆ? ಯಾವುದು ಏರಿಕೆ?
Advertisement
Advertisement
ಈ ಬಾರಿಯ ಬಜೆಟ್‍ನಲ್ಲಿ ರಾಷ್ಟ್ರೀಯ ಕ್ರೀಡಾ ಫೆಡರೇಷನ್‍ಗೆ 325 ಕೋಟಿ ರೂ. ನೆರವು ನೀಡಲಾಗಿದೆ. ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಈ ಬಾರಿ ಏಷ್ಯನ್ ಗೇಮ್ಸ್ ಮತ್ತು ಒಲಿಂಪಿಕ್ಸ್ ಅರ್ಹತಾ ಪಂದ್ಯಗಳಿಗಾಗಿ 785.52 ಕೋಟಿ ರೂ. ಅನುದಾನ ನೀಡಲಾಗಿದೆ. 2022-2023ನೇ ಸಾಲಿನ ಬಜೆಟ್‍ನಲ್ಲಿ ಕ್ರೀಡೆಗೆ ನೀಡಿದ್ದ ಅನುದಾನ ಈ ಬಾರಿ 358.5 ಕೋಟಿ ರೂ.ಗೆ ಏರಿಕೆ ಕಂಡಿದ್ದು, 2022-2023ನೇ ಸಾಲಿನಲ್ಲಿ 2,757 ಕೋಟಿ ರೂ. ಅನುದಾನ ನೀಡಲಾಗಿತ್ತು. ಇದನ್ನೂ ಓದಿ: Union Budget 2023: 157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ
Advertisement
2023-24 ಕ್ರೀಡಾ ಬಜೆಟ್ ಹಂಚಿಕೆ:
ಖೇಲೋ ಇಂಡಿಯಾ: 1,045 ಕೋಟಿ ರೂ.
ಸಾಯಿ: 785.52 ಕೋಟಿ ರೂ.
ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು: 325 ಕೋಟಿ ರೂ.
ರಾಷ್ಟ್ರೀಯ ಸೇವಾ ಯೋಜನೆ: 325 ಕೋಟಿ ರೂ.
ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ: 15 ಕೋಟಿ ರೂ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k