ನವದೆಹಲಿ: ಚುನಾವಣಾ (Lok Sabha Election) ಸಮಯದಲ್ಲಿ ಅಧಿಕಾರದಲ್ಲಿದ್ದ ಸರ್ಕಾರಗಳು ಭಾರೀ ಭರವಸೆ, ಉಚಿತ ಘೋಷಣೆಗಳನ್ನು ಮಾಡುವುದು ಸಾಮಾನ್ಯ. ಆದರೆ ಈ ಬಾರಿ ಮಂಡನೆಯಾದ ಮಧ್ಯಂತರ ಬಜೆಟ್‌ನಲ್ಲಿ (Interim Budget) ಕೇಂದ್ರ ಸರ್ಕಾರ ಉಚಿತ ಭರವಸೆ ನೀಡುವ ಸಂಪ್ರದಾಯಕ್ಕೆ ಬ್ರೇಕ್ ಹಾಕುವ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ.
ಬಜೆಟ್ ಸಿದ್ಧಪಡಿಸುವ ಸಮಯದಲ್ಲಿ ಪ್ರಧಾನಿ ಮೋದಿ (PM Narendra Modi) ಅಧಿಕಾರಿಗಳಿಗೆ ನೀಡಿದ ಸೂಚನೆಯ ಅನ್ವಯ ಯಾವುದೇ ಉಚಿತ ಭರವಸೆಗಳನ್ನು ಸರ್ಕಾರ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಿಲ್ಲ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ. ಇದನ್ನೂ ಓದಿ: Budget 2024: ಜನಸಂಖ್ಯಾ ಸ್ಫೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ
Advertisement
Advertisement
ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಮೋದಿ, ಬಡವರ ಕಲ್ಯಾಣ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದನ್ನು ಸರಿಯಾಗಿ ಜಾರಿ ಮಾಡುವ ಬಗ್ಗೆ ಗಮನ ಹರಿಸಬೇಕು ಎಂದು ಸೂಚಿಸಿದ್ದರು. ಇದನ್ನೂ ಓದಿ: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?
Advertisement
ಅಷ್ಟೇ ಅಲ್ಲದೇ 2024ರ ಬಜೆಟ್‌ನಲ್ಲಿ ಯಾವುದೇ ಉಚಿತ ಘೋಷಣೆಯ ಪ್ರಸ್ತಾಪ ಮಾಡಬೇಡಿ. ಉಚಿತ ಭರವಸೆಗಳನ್ನು ಘೋಷಣೆ ಮಾಡಿದ ಬಳಿಕ ಅದನ್ನು ಈಡೇರಿಸಲಾಗದೇ ಇದ್ದರೆ 2029ರಲ್ಲಿ ನಮ್ಮ ಸರ್ಕಾರ ನೆಲ ಕಚ್ಚುತ್ತದೆ. ದೇಶದ ಅಭಿವೃದ್ಧಿಗೆ ಪೂರಕವಾಗುವ ರೀತಿ ಬಜೆಟ್ ಸಿದ್ಧಪಡಿಸಿ ಎಂದು ಹೇಳಿದ್ದರು. ಇದನ್ನೂ ಓದಿ: ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು – ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ
Advertisement
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ನಿರ್ಮಲಾ ಸೀತಾರಾಮನ್ (Nirmala Sitharaman) ತಮ್ಮ ಬಜೆಟ್ ಭಾಷಣದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.