Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಜೆಟ್‌ನಲ್ಲಿ ಅನ್ಯಾಯ – ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿದ ಕರ್ನಾಟಕ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಜೆಟ್‌ನಲ್ಲಿ ಅನ್ಯಾಯ – ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿದ ಕರ್ನಾಟಕ

Bengaluru City

ಬಜೆಟ್‌ನಲ್ಲಿ ಅನ್ಯಾಯ – ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಿದ ಕರ್ನಾಟಕ

Public TV
Last updated: July 23, 2024 11:10 pm
Public TV
Share
2 Min Read
Siddaramaiah 2
SHARE

ಬೆಂಗಳೂರು: ಕೇಂದ್ರ ಬಜೆಟ್‌ನಲ್ಲಿ (Union Budget) ಕರ್ನಾಟಕಕ್ಕೆ (Karnataka) ಆಗಿರುವ ಅನ್ಯಾಯವನ್ನು ಖಂಡಿಸಿ ರಾಜ್ಯ ಸರ್ಕಾರ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ (Niti Aayog) ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಕೇಂದ್ರ ಸರ್ಕಾರದ ವಿರುದ್ಧ ದೀರ್ಘವಾದ ಪೋಸ್ಟ್‌ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದನ್ನೂ ಓದಿ: ಕೇಂದ್ರ ಬಜೆಟ್‌ : ಕರ್ನಾಟಕಕ್ಕೆ ಸಿಕ್ಕಿದ್ದೇನು?

nirmala sitharaman 1

ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ.

ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಇದನ್ನೂ ಓದಿ: ಬೆಂಗಳೂರು 5 ಭಾಗಗಳಾಗಿ ವಿಭಜನೆ – ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮಸೂದೆಯಲ್ಲಿ ಏನಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಬಜೆಟ್‌ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ.

 

ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ.

ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ.

 

ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ. ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ.

ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ.

ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು.

ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ.

 

TAGGED:budgetkarnatakanarendra modisiddaramaiahಕರ್ನಾಟಕನರೇಂದ್ರ ಮೋದಿಬಜೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

NARENDRA MODI RAJINIKANTH
ಸೂಪರ್‌ಸ್ಟಾರ್‌ @75 – ರಜನಿ ಪಾತ್ರಗಳು ಬೆಂಚ್‌ಮಾರ್ಕ್‌ ಸೃಷ್ಟಿಸಿವೆ: ಮೋದಿ
Cinema Latest National Top Stories
Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories

You Might Also Like

Raichur Coal
Crime

ಕ್ಲೀನಿಂಗ್ ಹೆಸರಲ್ಲಿ ಕಲ್ಲಿದ್ದಲು ಲೂಟಿ – ಪ್ರತಿನಿತ್ಯ 150 ಟನ್ ಸಾಗಾಟ

Public TV
By Public TV
55 minutes ago
Be careful when driving on highways at night
Bengaluru City

ಹೈವೇಗಳಲ್ಲಿ ರಾತ್ರಿ ವಾಹನ ಓಡಿಸೋವಾಗ ಎಚ್ಚರವಾಗಿರಿ – ಗಾಬರಿ ಹುಟ್ಟಿಸುತ್ತೆ ಸರ್ಕಾರಿ ಅಂಕಿ-ಅಂಶಗಳು

Public TV
By Public TV
1 hour ago
Girl
Latest

ಮುಗುಳ್ನಗೆಯ ಗಿಫ್ಟ್‌ ಹಿಡ್ಕೊಂಡು ಮತ್ತೆ ಮತ್ತೆ ಸಿಗ್ತಾಳೆ ಆ ಅಪರಿಚಿತೆ..!

Public TV
By Public TV
2 hours ago
towing 1
Bengaluru City

ಶೀಘ್ರವೇ ಬೆಂಗಳೂರಿನಲ್ಲಿ ಟೋಯಿಂಗ್‌ ಆರಂಭ!

Public TV
By Public TV
2 hours ago
Haveri Crime
Crime

ಯಾರದ್ದೋ ಜಾಗ ತೋರಿಸಿ ಲಕ್ಷ ಲಕ್ಷ ಪಂಗನಾಮ – ಕಂತೆ ಕಂತೆ ನೋಟು ಕೊಟ್ಟು ಮೋಸ ಹೋದ ಉದ್ಯಮಿ!

Public TV
By Public TV
3 hours ago
Belagavi Session DCM DK Shivakumar Dinner Politics with over 40 MLAs
Belgaum

40ಕ್ಕೂ ಹೆಚ್ಚು ಶಾಸಕರ ಜೊತೆ ಡಿಕೆಶಿ ಡಿನ್ನರ್‌ ಪಾಲಿಟಿಕ್ಸ್‌!

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?