ನವದೆಹಲಿ: ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ (Niramala Sitharaman) ಅವರು ಮಂಡಿಸುತ್ತಿರುವ ಮಧ್ಯಂತರ ಬಜೆಟ್ನಲ್ಲಿ ನಾರಿ ಶಕ್ತಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.
ನಾರಿಶಕ್ತಿಗೆ (Narishakti) ಹೆಚ್ಚಿನ ಒತ್ತು ನೀಡಲಾಗುವುದು ಎಂದ ಅವರು, ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ 28% ಹೆಚ್ಚಾಗಿದೆ. ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕೋರ್ಸ್ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು 43% ದಾಖಲಾತಿಯನ್ನು ಮಾಡುತ್ತಾರೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ತಿಳಿಸಿದ್ದಾರೆ.
Advertisement
Advertisement
ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ 70% ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದರು. ಇದನ್ನೂ ಓದಿ: ಡಿಬಿಟಿ ಮೂಲಕ 34 ಲಕ್ಷ ಕೋಟಿ ರೂ. ವಿತರಣೆ : ನಿರ್ಮಲಾ ಸೀತಾರಾಮನ್