– ಬಜೆಟ್‌ನಲ್ಲಿ ಕಸ್ಟಮ್ಸ್ ಸುಂಕ ಇಳಿಸಿದ ನಿರ್ಮಲಾ ಸೀತಾರಾಮನ್
– ಭಾರತದ ಮೇಲೆ ನಾವು ತೆರಿಗೆ ವಿಧಿಸುತ್ತೇವೆ ಎಂದಿದ್ದ ಟ್ರಂಪ್
ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ (Union Budget) ವಿದೇಶದಿಂದ ಅಮದಾಗುವ ದುಬಾರಿ ಮೋಟಾರ್‌ಸೈಕಲ್‌ಗಳು, ಕಾರುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಗಣನೀಯವಾಗಿ ಕಡಿತ ಮಾಡಿದೆ.
ಈ ಫೆಬ್ರವರಿಯಲ್ಲೇ ಪ್ರಧಾನಿ ಮೋದಿ (PM Narendra Modi) ಅವರು ಅಮೆರಿಕಕ್ಕೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲೇ ಸುಂಕ ಕಡಿಮೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
Advertisement
ಡೊನಾಲ್ಡ್ ಟ್ರಂಪ್ ಅವರು ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ ನಾವು ತೆರಿಗೆ ವಿಧಿಸುವುದಿಲ್ಲ. ಆದರೆ ಅಮೆರಿಕದಿಂದ ಭಾರತಕ್ಕೆ ಹೋಗುವ ವಸ್ತುಗಳ ಮೇಲೆ ಭಾರೀ ತೆರಿಗೆ ವಿಧಿಸಲಾಗುತ್ತದೆ. ಇನ್ನು ಮುಂದೆ ಈ ರೀತಿ ಆಗಲು ಬಿಡುವುದಿಲ್ಲ. ಅವರು ಎಷ್ಟು ಪ್ರಮಾಣದ ತೆರಿಗೆ ವಿಧಿಸುತ್ತಾರೋ ಅಷ್ಟೇ ಪ್ರಮಾಣದ ತೆರಿಗೆ ವಿಧಿಸಲಾಗುವುದು ಎಂದಿದ್ದರು. ಈ ಎಚ್ಚರಿಕೆಯ ಬೆನ್ನಲ್ಲೇ ಈ ಬಾರಿ ಬಜೆಟ್‌ನಲ್ಲಿ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗಿದೆ.
Advertisement
Advertisement
ಶನಿವಾರ ತಮ್ಮ ಬಜೆಟ್ ಭಾಷಣದಲ್ಲಿ ಸೀತಾರಾಮನ್ (Nirmala sSitharaman) ಅವರು 1,600 ಸಿಸಿ ವರೆಗಿನ ಎಂಜಿನ್ ಸಾಮರ್ಥ್ಯ ಹೊಂದಿರುವ, ಸಂಪೂರ್ಣವಾಗಿ ಬಿಲ್ಟ್-ಅಪ್ (ಸಿಬಿಯು) ಯೂನಿಟ್‌ಗಳಾಗಿ ಆಮದು ಮಾಡಿಕೊಳ್ಳುವ ಹೈ-ಎಂಡ್ ಮೋಟಾರ್‌ಸೈಕಲ್‌ಗಳ ಆಮದು ಸುಂಕವನ್ನು ಹಿಂದಿನ 50% ಬದಲು 10% ಕಡಿತಗೊಳಿಸಿ 40% ವಿಧಿಸಲಾಗುವುದು ಎಂದು ಘೋಷಿಸಿದ್ದರು.
Advertisement
40 ಸಾವಿರ ಡಾಲರ್(34.82 ಲಕ್ಷ ರೂ.) ಬೆಲೆಯ ಸ್ಟೇಷನ್ ವ್ಯಾಗನ್‌ಗಳು ಮತ್ತು ರೇಸ್‌ಕಾರ್‌ಗಳು ಸೇರಿದಂತೆ ಐಷಾರಾಮಿ ಕಾರುಗಳ ಮೇಲಿನ 125% ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈಗ ಈ ತೆರಿಗೆಯನ್ನು 70% ಇಳಿಸಲಾಗಿದೆ. ಅಷ್ಟೇ ಅಲ್ಲದೇ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಬಳಸುವ ಲಿಥಿಯಂ-ಐಯಾನ್ ಬ್ಯಾಟರಿಗಳ ಮೂಲ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಅವರು ತೆರಿಗೆ ವಿಧಿಸಿದ್ರೆ ನಾವು ಅವರ ಮೇಲೆ ಅಷ್ಟೇ ತೆರಿಗೆ ಹಾಕ್ತೀವಿ: ಭಾರತಕ್ಕೆ ಟ್ರಂಪ್ ಬೆದರಿಕೆ
ಕೇಂದ್ರದ ಈ ನಿರ್ಧಾರದಿಂದ ಅಮೆರಿದಕಿಂದ ಆಮದಾಗುವ ಹಾರ್ಲೆ ಡೇವಿಡ್ಸನ್ ಬೈಕ್ ಮತ್ತು ಟೆಸ್ಲಾ ಕಾರುಗಳ ಬೆಲೆ ಭಾರತದಲ್ಲಿ ಕಡಿಮೆಯಾಗಲಿದೆ.
ಟ್ರಂಪ್ ಸುಂಕ ಸಮರ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಗಿದ್ಯಾ ಎಂಬ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್, ನಮ್ಮ ಆರ್ಥಿಕತೆಯನ್ನು ಬಲಗೊಳಿಸುವುದು ನಮ್ಮ ಗುರಿ. ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಮಾಡುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಹಾರ್ಲೆ ಡೇವಿಡ್ಸನ್ ಬೈಕಿನ ಮೇಲೆ ಹೆಚ್ಚು ಆಮದು ಸುಂಕ ಹೇರಿದ್ದ ಭಾರತದ ವಿರುದ್ಧ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ತಮ್ಮ ಮೊದಲ ಅವಧಿಯಲ್ಲಿ ಕಿಡಿಕಾರಿದ್ದರು. ನಾವು ಹಾರ್ಲೆಯನ್ನು ಭಾರತಕ್ಕೆ ಕಳುಹಿಸಿದರೆ ಅವರು 100% ತೆರಿಗೆ ವಿಧಿಸುತ್ತಾರೆ. ಭಾರತದವರು ಸಾಕಷ್ಟು ಸಂಖ್ಯೆಯ ಮೋಟಾರ್ ಸೈಕಲ್ ತಯಾರಿಸಿ ನಮಗೆ ಕಳುಹಿಸಿದಾಗ ಯಾವುದೇ ತೆರಿಗೆ ಇಲ್ಲ. ನಾನು ಮೋದಿ ಅವರಿಗೆ ಕರೆ ಮಾಡಿ ಈ ವಿಚಾರದ ಬಗ್ಗೆ ತಿಳಿಸಿದ್ದೆ. ಆದರೆ ಅವರು ಸ್ವಲ್ಪ ತೆರಿಗೆ ಕಡಿಮೆ ಮಾಡಿದ್ದರು ಎಂದು ಹೇಳಿದ್ದರು.
ಸದ್ಯ ಟ್ರಂಪ್ ಪರ ಗುರುತಿಸಿಕೊಂಡಿರುವ ಎಲಾನ್ ಮಸ್ಕ್ ಭಾರತದಲ್ಲಿ ಟೆಸ್ಲಾ ಕಾರು ಮಾರಾಟಕ್ಕೆ ಭಾರೀ ಪ್ರಯತ್ನ ಪಡುತ್ತಿದ್ದಾರೆ. ಮುಖ್ಯವಾಗಿ ಚೀನಾದಲ್ಲಿ ಉತ್ಪಾದನೆಯಾದ ಕಾರುಗಳನ್ನು ಮಾರಾಟ ಮಾಡಲು ಬಹಳ ಪ್ರಯತ್ನ ಪಟ್ಟಿದ್ದರು. ಆದರೆ ಭಾರತ ಸರ್ಕಾರ ಮಸ್ಕ್‌ಗೆ ಭಾರತದಲ್ಲೇ ಕಾರು ಉತ್ಪಾದನೆ ಮಾಡಿ ಎಂದು ತಿಳಿಸಿತ್ತು.
ಪ್ರಸ್ತುತ ಮಸ್ಕ್ ಮತ್ತು ಭಾರತ ಸರ್ಕಾರದ ಮಧ್ಯೆ ಅಮದು ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿದೆ. ವಿದೇಶದಿಂದ ಭಾರತಕ್ಕೆ ಬರುವ 40 ಲಕ್ಷ ಡಾಲರ್(ಅಂದಾಜು 30 ಲಕ್ಷ ರೂ.) ಮೌಲ್ಯದ ಎಲೆಕ್ಟ್ರಿಕ್ ವಾಹನಕ್ಕೆ 60% ರಷ್ಟು ತೆರಿಗೆ ವಿಧಿಸಲಾಗುತ್ತದೆ. 40 ಲಕ್ಷ ಡಾಲರ್‌ಗಿಂದ ಹೆಚ್ಚಿನ ಮೌಲ್ಯದ ಎಲೆಕ್ಟ್ರಿಕ್ ವಾಹನಗಳಿಗೆ 100% ರಷ್ಟು ತೆರಿಗೆ ವಿಧಿಸಲಾಗುತ್ತದೆ.
ಈ ಹಿಂದೆ 2022ರ ಜನವರಿಯಲ್ಲಿ ಭಾರತೀಯ ಟ್ವಿಟ್ಟರ್ ಬಳಕೆದಾರನೊಬ್ಬನ ಪ್ರಶ್ನೆಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ ನೀಡುವ ಮೂಲಕ ಟೆಸ್ಲಾ ಕಾರುಗಳನ್ನು ಮಾರಾಟ ಮಾಡುವ ಬಗ್ಗೆ ಅಪ್‍ಡೇಟ್ ನೀಡಿದ್ದರು. ಟೆಸ್ಲಾ ಕಂಪನಿ ಭಾರತದಲ್ಲಿ ಕಾರುಗಳನ್ನು ಮಾರಾಟ ಮಾಡಲು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಕಂಪನಿ ಈ ಯೋಜನೆಯ ಕುರಿತಾಗಿ ಸರ್ಕಾರದೊಂದಿಗೆ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ ಎಂದು ಹೇಳಿದ್ದರು.