ನವದೆಹಲಿ: ಮುಂದಿನ 3 ವರ್ಷಗಳಲ್ಲಿ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು (Daycare Cancer Centres) ಸ್ಥಾಪಿಸಲಾಗುವುದು ಎಂದು ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಈ ಪೈಕಿ 200 ಕೇಂದ್ರಗಳನ್ನು 2025-26ರಲ್ಲಿ ಸ್ಥಾಪಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಮುಂದಿನ ವರ್ಷ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಹೆಚ್ಚುವರಿಯಾಗಿ 10,000 ಸೀಟುಗಳನ್ನು ಸೇರಿಸಲಾಗುವುದು. ಮುಂದಿನ ಐದು ವರ್ಷಗಳಲ್ಲಿ ಈ ಕಾಲೇಜುಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: Budget 2025: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್
Advertisement
Advertisement
ಬಜೆಟ್‌ನಲ್ಲಿ, ಕ್ಯಾನ್ಸರ್, ಅಪರೂಪದ ಕಾಯಿಲೆಗಳು ಮತ್ತು ಇತರ ತೀವ್ರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ನೆರವಾಗಲು 36 ಜೀವರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ವಿನಾಯಿತಿ ನೀಡಲಾಗಿದೆ.
Advertisement
ಔಷಧ ಕಂಪನಿಗಳು ನಡೆಸುವ ರೋಗಿಯ ಸಹಾಯ ಕಾರ್ಯಕ್ರಮಗಳ ಅಡಿಯಲ್ಲಿ ನಿರ್ದಿಷ್ಟಪಡಿಸಿದ ಔಷಧಿಗಳನ್ನು ರೋಗಿಗಳಿಗೆ ಉಚಿತವಾಗಿ ಪೂರೈಸಿದರೆ, ಅವು ಬಿಸಿಡಿಯಿಂದ ಸಂಪೂರ್ಣವಾಗಿ ವಿನಾಯಿತಿ ಪಡೆಯಲಿವೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: Budget 2025: ಒಂದು ರೂ. ಬಂದಿದ್ದು ಹೇಗೆ? ಹೋಗಿದ್ದು ಹೇಗೆ?
Advertisement
ಖಾಸಗಿ ವಲಯದ ಸಹಭಾಗಿತ್ವದಲ್ಲಿ ವೈದ್ಯಕೀಯ ಪ್ರವಾಸೋದ್ಯಮ ಮತ್ತು ‘ಹೀಲ್ ಇನ್ ಇಂಡಿಯಾ’ಗೆ ಉತ್ತೇಜನ ನೀಡಲಾಗುವುದು. ಜೊತೆಗೆ ಸಾಮರ್ಥ್ಯ ವೃದ್ಧಿ ಮತ್ತು ಸುಲಭ ವೀಸಾ ಮಾನದಂಡಗಳನ್ನು ಅಳವಡಿಸಲಾಗುವುದು ಎಂದು ಹೇಳಿದ್ದಾರೆ.
ಗಿಗ್ ಕೆಲಸಗಾರರಿಗೆ (ಗುತ್ತಿಗೆ ಸಂಸ್ಥೆ ಕೆಲಸಗಾರರು) ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (PM-JAY) ಅಡಿಯಲ್ಲಿ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಆಯವ್ಯಯದಲ್ಲಿ ಸೀತಾರಾಮನ್ ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ