ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ (Union Budget 2025) ಸಚಿವರ ವೇತನಕ್ಕಾಗಿ 1,024 ಕೋಟಿ ಹಣವನ್ನು ಹಂಚಿಕೆ ಮಾಡಲಾಗಿದೆ.
ಶನಿವಾರ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್‌ನಲ್ಲಿ, ಸಚಿವ ಸಂಪುಟ, ಸಂಪುಟ ಸಚಿವಾಲಯ, ಪ್ರಧಾನ ಮಂತ್ರಿ ಕಚೇರಿಯ ವೆಚ್ಚಗಳು, ರಾಜ್ಯದ ಅತಿಥಿಗಳ ಆತಿಥ್ಯ ಮತ್ತು ಮನರಂಜನೆಗಾಗಿ 1,024.30 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 12 ಲಕ್ಷ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ – ಇಲ್ಲಿದೆ ಸರಳ ಲೆಕ್ಕಾಚಾರ
Advertisement
Advertisement
2024-25 ರಲ್ಲಿ 1,021.83 ಕೋಟಿ ರೂ. ಮೀಸಲಿಡಲಾಗಿತ್ತು. ಆ ಮೊತ್ತದಲ್ಲಿ ಈ ಬಾರಿ ಹೆಚ್ಚಳ ಆಗಿದೆ. ಮುಂಬರುವ ಹಣಕಾಸು ವರ್ಷದಲ್ಲಿ ಸಚಿವ ಸಂಪುಟದ ವೆಚ್ಚಗಳಿಗಾಗಿ ಒಟ್ಟು 619.04 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ. 2024-25ರಲ್ಲಿ ಇದು 540.95 ಕೋಟಿ ರೂ.ಗಳಷ್ಟಿತ್ತು ಎಂದು ಹೇಳಿದ್ದಾರೆ.
Advertisement
ಸಂಪುಟ ಸಚಿವರು, ರಾಜ್ಯ ಸಚಿವರು ಮತ್ತು ಮಾಜಿ ಪ್ರಧಾನ ಮಂತ್ರಿಗಳ ಸಂಬಳ, ಇತರ ಭತ್ಯೆಗಳು ಮತ್ತು ಪ್ರಯಾಣದ ವೆಚ್ಚಕ್ಕಾಗಿ ಹಣ ಮೀಸಲಿಡಲಾಗಿದೆ. ಇದು ವಿವಿಐಪಿಗಳಿಗಾಗಿ ವಿಶೇಷ ಹೆಚ್ಚುವರಿ ಅವಧಿ ವಿಮಾನ ಕಾರ್ಯಾಚರಣೆಗಳ ನಿಬಂಧನೆಯನ್ನು ಸಹ ಒಳಗೊಂಡಿದೆ. ಇದನ್ನೂ ಓದಿ: Union Budget 2025| ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ಏನು?
Advertisement
ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯಕ್ಕೆ 2024-25ರಲ್ಲಿ 270.08 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿತ್ತು. ಈ ಬಾರಿ 182.75 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ. ಇದನ್ನೂ ಓದಿ: Budget 2025: ಬಾಡಿಗೆ ಮೇಲಿನ TDS ಕಡಿತ ಮಿತಿ 6 ಲಕ್ಷಕ್ಕೆ ಏರಿಕೆ