– ಚುನಾವಣೆ ಹೊತ್ತಲ್ಲೇ ಕೇಂದ್ರ ಸಂಪುಟದ ಮಹತ್ವದ ನಿರ್ಧಾರ
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಕೇರಳಂ(Keralam) ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ(Union Cabinet) ಅನುಮೋದನೆ ನೀಡಿದೆ.
ಕೇರಳವನ್ನು (Kerala) ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ (Ashwini Vaishnav) ಹೇಳಿಕೆಯಲ್ಲಿ ತಿಳಿಸಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಸಚಿವ ಸಂಪುಟದ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ.
ಇಂದು ಹೊಸ ಪ್ರಧಾನಿ ಕಚೇರಿ ಕಟ್ಟಡ ಸೇವಾ ತೀರ್ಥದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಾಗಿತ್ತು.ಕೇರಳ ವಿಧಾನಸಭೆಯು 2024 ಜೂನ್ 24ರಂದು ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿ, ಸಂವಿಧಾನದ ಅನುಚ್ಛೇದ 3ರ ಅಡಿಯಲ್ಲಿ ರಾಜ್ಯದ ಹೆಸರನ್ನು ‘ಕೇರಳಂ’ ಎಂದು ಬದಲಾಯಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಇದನ್ನೂ ಓದಿ: ಗರ್ಭಕಂಠದ ಕ್ಯಾನ್ಸರ್ ವಿರುದ್ಧ ಸಮರ – ಹದಿಹರೆಯದ ಹೆಣ್ಣು ಮಕ್ಕಳಿಗೆ ಕೇಂದ್ರದಿಂದ ಉಚಿತ ಲಸಿಕೆ

