ತುಮಕೂರು: ಸಿದ್ದಗಂಗಾ ಮಠದ (Siddaganda Mata) ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ (Shivakumara Swamiji) 118ನೇ ಜನ್ಮದಿನೋತ್ಸವ ಸಲುವಾಗಿ ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಮಂತ್ರ ಘೋಷಗಳೊಂದಿಗೆ ಪೂಜೆ ಕಾರ್ಯಗಳು ನೆರೆವೇರುತ್ತಿವೆ. ಪೂಜೆಯಲ್ಲಿ ವಿವಿಧ ಮಠಾಧಿಪತಿಗಳು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಗಾಜಾದಲ್ಲಿ ಇಸ್ರೇಲ್ ಮತ್ತೆ ದಾಳಿ – 10 ದಿನಗಳಲ್ಲಿ 300 ಮಕ್ಕಳು ಸಾವು
ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಭಾಗಿಯಾಗಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar), ಗೃಹ ಸಚಿವ ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಸುತ್ತೂರು ಶ್ರೀಗಳು ಸೇರಿ ಹಲವರು ಉಪಸ್ಥಿತರಿರಲಿದ್ದಾರೆ. ಇದನ್ನೂ ಓದಿ: ಮಹಿಳೆ ಅನುಮಾನಾಸ್ಪದ ಸಾವು – ಪತಿಯ ಅಕ್ರಮ ಸಂಬಂಧದಿಂದ ಕೊಲೆ ಆರೋಪ