ನವದೆಹಲಿ: ಮೈಸೂರು ದಸರಾ (Mysuru Dasara) ಉತ್ಸವದಲ್ಲಿ ವೈಮಾನಿಕ ಪ್ರದರ್ಶನ (Air Show) ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ (Defence Corridor) ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ
ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿರುವ ಬಗ್ಗೆ ವಿವರಿಸಿದರು. ಇದನ್ನೂ ಓದಿ:ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ
ರಾಹುಲ್ ಗಾಂಧಿಯನ್ನು ಭೇಟಿಯಾಗುವ ಕಾರ್ಯಕ್ರಮವಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಹುಲ್ ಗಾಂಧಿಯವರನ್ನು ಸಾಧ್ಯವಾದರೆ ಭೇಟಿಯಾಗುವುದಾಗಿ ತಿಳಿಸಿದರು. ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದರು. ಇದನ್ನೂ ಓದಿ: ಉತ್ತರ ಭಾರತದ ಹಲವು ರಾಜ್ಯಗಳಿಗೆ ಪ್ರವಾಹ ಎಚ್ಚರಿಕೆ – ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್