ದೇಶದ ನಾನಾ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಕಾಂತಾರ (Kantara) ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ಮಠಾಧೀಶರು ಮತ್ತು ರಾಜಕೀಯ ಮುಖಂಡರು ಚಿತ್ರವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಮೊನ್ನೆಯಷ್ಟೇ ಸದ್ಗುರು ಜಗ್ಗಿವಾಸುದೇವ್, ಶ್ರೀ ರವಿಶಂಕರ್ ಗುರೂಜಿ ತಮ್ಮ ಆಶ್ರಮದಲ್ಲೇ ಭಕ್ತರೊಟ್ಟಿಗೆ ಸಿನಿಮಾ ನೋಡಿದ್ದರು, ಈ ಸಿನಿಮಾದ ವಿಶೇಷತೆ ಬಗ್ಗೆ ಮಾತನಾಡಿದ್ದರು. ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿನಿಮಾ ನೋಡಿದ್ದಾರೆ.
Advertisement
ಬೆಂಗಳೂರಿನಲ್ಲಿ ತಮ್ಮ ಆಪ್ತರು ಮತ್ತು ಸ್ವಯಂ ಸೇವಕರ ಜೊತೆ ಸಿನಿಮಾ ನೋಡಿರುವ ನಿರ್ಮಲಾ ಸೀತಾರಾಮನ್ (Nirmala Sitharaman) ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಇಂತಹ ಚಿತ್ರಗಳು ಹೆಚ್ಚೆಚ್ಚು ತೆರೆಯ ಮೇಲೆ ಬರಬೇಕು ಎನ್ನುವ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾವಿದು ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ
Advertisement
Advertisement
ನಿರ್ಮಲಾ ಸೀತಾರಾಮನ್ ಮಾಡಿರುವ ಟ್ವೀಟ್‌ಗೆ ರಿಷಬ್ ಶೆಟ್ಟಿ (Rishabh Shetty) ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಹಣಕಾಸು ಸಚಿವರಿಗೆ ಧನ್ಯವಾದಗಳನ್ನೂ ಅವರು ತಿಳಿಸಿದ್ದಾರೆ. ಕಾಂತಾರ ಸಿನಿಮಾ ಈಗಾಗಲೇ ನಾನಾ ಭಾಷೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹದಿನೈದು ಕೋಟಿಯಲ್ಲಿ ತಯಾರಾದ ಈ ಸಿನಿಮಾ ಅಂದಾಜು 300 ಕೋಟಿ ಗಳಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಹಿಂದಿಯಲ್ಲೂ ಅದು ಹೌಸ್ ಫುಲ್ ಕಾಣುವ ಮೂಲಕ ದಾಖಲೆ ಕೂಡ ಬರೆದಿದೆ.