ನವದೆಹಲಿ: ಜನವರಿ 31 ರಿಂದ ಕೇಂದ್ರ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿಯ ಶಿಫಾರಸನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ.
ಜನವರಿ 31 ರಂದು ಸಂಸತ್ತಿನ ಎರಡು ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೊವೀಂದ್ ಭಾಷಣ ಮಾಡಲಿದ್ದಾರೆ. ಫೆಬ್ರವರಿ 2 ರಂದು ರಾಷ್ಟ್ರಪತಿಗಳ ಭಾಷಣಕ್ಕೆ ಅಭಿನಂದನೆ ಸಲ್ಲಿಸಲಿದ್ದು, ಫೆ.3 ರಿಂದ ಬಜೆಟ್ ಮೇಲಿನ ಚರ್ಚೆ ಆರಂಭವಾಗಲಿದೆ. ಮೊದಲ ಹಂತದಲ್ಲಿ 12 ದಿನಗಳ ಅಧಿವೇಶನ ನಡೆಯಲಿದ್ದು ಫೆ.11 ಕ್ಕೆ ಅಂತ್ಯವಾಗಲಿದೆ. ಇದನ್ನೂ ಓದಿ: ಶಾಕಿಂಗ್ ಡಿಆರ್‌ಎಸ್ ವಿಡಿಯೋಗೆ ಕೊಹ್ಲಿ ಕಿಡಿ – ರಿವ್ಯೂ ಸಕ್ಸಸ್ ಎಂದು ವಾಹಿನಿಯಿಂದ ಸಮರ್ಥನೆ
Advertisement
Advertisement
ಒಂದು ತಿಂಗಳ ಅವಧಿಯ ಬಿಡುವಿನ ಬಳಿಕ ಮಾರ್ಚ್ 14 ರಿಂದ ಬಜೆಟ್ ಅಧಿವೇಶನದ ಎರಡನೇ ಭಾಗ ಆರಂಭಗೊಳ್ಳಲಿದ್ದು, ಏಪ್ರಿಲ್ 8ರವರೆಗೂ ಅಧಿವೇಶನ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಕೊರೊನಾ ಮೂರನೇ ಅಲೆಯ ಭೀತಿಯ ನಡುವೆ ಬಜೆಟ್ ಮಂಡನೆಯಾಗಲಿದ್ದು, ಹಲವು ಮಹತ್ವದ ಮಸೂದೆಗಳು ಈ ಬಾರಿಯ ಅಧಿವೇಶನದಲ್ಲಿ ಚರ್ಚೆಗೆ ಬರಲಿದೆ.